ADVERTISEMENT

ದ.ಆಫ್ರಿಕಾ ವಿರುದ್ಧ ಸೂರ್ಯವಂಶಿ ಬ್ಯಾಟಿಂಗ್ ವೈಭವ: ಸ್ಫೋಟಕ ಶತಕ ಸಿಡಿಸಿ ಮಿಂಚು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2026, 11:30 IST
Last Updated 7 ಜನವರಿ 2026, 11:30 IST
<div class="paragraphs"><p>ವೈಭವ್ ಸೂರ್ಯವಂಶಿ</p></div>

ವೈಭವ್ ಸೂರ್ಯವಂಶಿ

   

ಚಿತ್ರ: @Varungiri0

ಬೆನೋನಿ: ಇಲ್ಲಿನ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ದಕ್ಷಿಣ ಆಫ್ರಿಕಾ ಹಾಗೂ ಭಾರತ ತಂಡಗಳ ನಡುವಿನ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವೈಭವ್ ಸೂರ್ಯವಂಶಿ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ.

ADVERTISEMENT

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ವೈಭವ್ ಸೂರ್ಯವಂಶಿ ನಾಯಕತ್ವದ 19 ವರ್ಷದೊಳಿನವರ ಭಾರತ ತಂಡ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ 2–0 ಅಂತರದಲ್ಲಿ ಸರಣಿ ಗೆದ್ದುಕೊಂಡಿದೆ.

ಎರಡನೇ ಪಂದ್ಯದಲ್ಲಿ 24 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 1 ಬೌಂಡರಿ ಸಹಿತ ಸ್ಫೋಟಕ 68 ರನ್ ಗಳಿಸಿದ್ದ ವೈಭವ್. ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕೇವಲ 74 ಎಸೆತಗಳಲ್ಲಿ 128 ರನ್ ಸಿಡಿಸಿವ ಮೂಲಕ ಗಮನ ಸೆಳೆದಿದ್ದಾರೆ.

ಬೆನೋನಿಯ ವಿಲ್ಲೋಮೂರ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡಕ್ಕೆ ಉತ್ತಮ ಆರಂಭ ದೊರಕಿತು. ಆರಂಭಿಕರಾದ ಆ್ಯರೋನ್ ಜಾರ್ಜ್ ಜೊತೆ ಸ್ಫೋಟಕ ಇನಿಂಗ್ಸ್ ಕಟ್ಟಿದ ಸೂರ್ಯವಂಶಿ ಕೇವಲ 63 ಎಸತೆಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಈ ಜೋಡಿ ಮೊದಲ ವಿಕೆಟ್‌ಗೆ 154 ಎಸೆತಗಳಲ್ಲಿ 227ರನ್‌ಗಳ ಜೊತೆಯಾಟ ಆಡಿದರು.

ಶತಕದ ಬಳಿಕವೂ ಮಿಂಚಿನ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ 74 ಎಸೆತಗಳಲ್ಲಿ 10 ಸಿಕ್ಸರ್ ಹಾಗೂ 9 ಬೌಂಡರಿಗಳ ನೆವಿನಿಂದ 127 ರನ್ ಸಿಡಿಸಿದರು. ಹಾಗೂ ಇನ್ನೋರ್ವ ಆರಂಭಿಕ ಬ್ಯಾಟರ್ ಆ್ಯರೋನ್ ಜಾರ್ಜ್ ಅವರ 118 ರನ್‌ಗಳ ನೆರವಿನಿಂದ ಭಾರತ ಯುವ ತಂಡ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 393 ರನ್ ಕಲೆಹಾಕಿದೆ. ಆ ಮೂಲಕ ದಕ್ಷಿಣ ಆಫ್ರಿಕಾ ಗೆಲುವಿಗೆ 394 ರನ್‌ಗಳ ಗುರಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.