
ವೈಭವ್ ಸೂರ್ಯವಂಶಿ
ಪಾಟ್ನಾ: ಇಲ್ಲಿನ ಮೊಹಿನುಲ್ ಹಕ್ ಮೈದಾನದಲ್ಲಿ ನಡೆದ ರಣಜಿ ಪ್ಲೇಟ್ ಪಂದ್ಯದಲ್ಲಿ ಮೇಘಾಲಯ ಹಾಗೂ ಬಿಹಾರ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಬಿಹಾರ ಪರ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದರು. ಮಾತ್ರವಲ್ಲ ಸ್ಫೋಟಕ 93 ರನ್ ಗಳಿಸಿದರು.
ಈ ಪಂದ್ಯದಲ್ಲಿ ಬಿಹಾರ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಎಂದಿನಂತೆ ತಮ್ಮ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರು. ಪರಿಣಾಮ ಕೇವಲ 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ 9 ಬೌಂಡರಿ ಹಾಗೂ 4 ಸಿಕ್ಸರ್ ನೆರವಿನಿಂದ 67 ಎಸೆತಗಳಲ್ಲಿ 93 ರನ್ ಬಾರಿಸಿ ಔಟ್ ಆದರು.
ಕಳೆದ ಕೆಲವು ತಿಂಗಳುಗಳಿಂದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಪ್ರವಾಸದಲ್ಲಿದ್ದ 14 ವರ್ಷದ ಸೂರ್ಯವಂಶಿ ಮಂಗಳವಾರ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್‌ಗಾಗಿ ಆಯ್ಕೆ ಮಾಡಿರುವ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ನವೆಂಬರ್ 14 ರಿಂದ 23ರವರೆಗೆ ಕತಾರ್‌ನ ದೋಹಾದ ವೆಸ್ಟ್ ಎಂಡ್ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ತಂಡವನ್ನು ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಮುನ್ನಡೆಸಲಿದ್ದು, ನಮನ್ ಧೀರ್ ಉಪನಾಯಕರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.