ADVERTISEMENT

SMAT | ವೈಭವ್ ಸೂರ್ಯವಂಶಿ ಸ್ಫೋಟಕ ಶತಕ: ಇತಿಹಾಸ ನಿರ್ಮಿಸಿದ 14 ವರ್ಷದ ಪೋರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಡಿಸೆಂಬರ್ 2025, 10:23 IST
Last Updated 2 ಡಿಸೆಂಬರ್ 2025, 10:23 IST
ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ   

14 ವರ್ಷದ ವೈಭವ್ ಸೂರ್ಯವಂಶಿ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ರೈಸಿಂಗ್ ಸ್ಟಾರ್ಸ್ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಕೇವಲ 32 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದ ವೈಭವ್, ಇದೀಗ ಸೈಯ್ಯದ್ ಮುಷ್ತಾಕ್ ಅಲಿ ಕ್ರಿಕೆಟ್ ಟೂರ್ನಿಯಲ್ಲೂ ತಮ್ಮ ಅಬ್ಬರ ಮುಂದುವರೆಸಿದ್ದಾರೆ.

ಕೊಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಸ್ಫೋಟಕ ಸೆಂಚುರಿ ಸಿಡಿಸಿದ್ದಾರೆ. ಆ ಮೂಲಕ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಿಹಾರ ಪರ ಆರಂಭಿಕರಾದ ಬಿಪಿನ್ ಸೌರಭ್ (4) ಬೇಗನೆ ಔಟ್ ಆದರು. ಆದರೆ, ಇನ್ನೋರ್ವ ಆರಂಭಿಕ 14 ವರ್ಷದ ವೈಭವ್ ಸೂರ್ಯವಂಶಿ 61 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್ ನೆರವಿನಿಂದ ಅಜೇಯ 108 ರನ್ ಗಳಿಸಿದರು. ಆ ಮೂಲಕ ಮಹರಾಷ್ಟ್ರ ಗೆಲುವಿಗೆ 177ರನ್‌ಗಳ ಟಾರ್ಗೆಟ್ ನೀಡಿದರು.

ADVERTISEMENT

ಮಹಾರಾಷ್ಟ್ರ ಪರ ನಾಯಕ ಪೃಥ್ವಿ ಶಾ 30 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ನೆರವಿನಿಂದ 66 ರನ್ ಸಿಡಿಸಿದರು. ಆ ಮೂಲಕ 7 ವಿಕೆಟ್ ಕಳೆದುಕೊಂಡು ಮಹಾರಾಷ್ಟ್ರ ಗೆಲುವಿನ ನಗೆ ಬೀರಿತು.

ಐಪಿಎಲ್‌ನಲ್ಲಿ ಶತಕ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಆ ಮೂಲಕ ಐಪಿಎಲ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆ ಕೂಡ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.