
ಅಬುಧಾಬಿ: ಕಳೆದ ವರ್ಷ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿನಲ್ಲಿ ಯುವ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಅವರನ್ನು ಖರೀದಿಸಲು ಭಾರೀ ಪೈಪೋಟಿ ನಡೆಸಿ ಅಂತಿಮ ಹಂತದಲ್ಲಿ ಕೊಲ್ಕತ್ತ ನೈಟ್ ರೈಡರ್ಸ್‌ಗೆ ಬಿಟ್ಟುಕೊಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಈ ಬಾರಿ ₹7 ಕೋಟಿ ನೀಡಿ ತಂಡಕ್ಕೆ ಸೇರಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ವೆಂಕಟೇಶ್ ಅಯ್ಯರ್‌ಗಾಗಿ ಕೆಕೆಆರ್ ಜೊತೆ ಆರಂಭದಿಂದಲೂ ಪೈಪೋಟಿ ನಡೆಸಿದ ಆರ್‌ಸಿಬಿ ಫ್ರಾಂಚೈಸಿ ಅಂತಿಮವಾಗಿ ₹7 ಕೋಟಿಗೆ ತಂಡಕ್ಕೆ ಸೇರಿಸಿಕೊಂಡಿದೆ. ಆ ಮೂಲಕ ತಂಡದ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಗೊಳಿಸಿದೆ.
ಆರ್‌ಸಿಬಿ ಸೇರಿದ ವೆಂಕಟೇಶ್ ಅಯ್ಯರ್ ಪ್ರತಿಕ್ರಿಯೆ ನೀಡಿದ್ದು, ‘ನಮಸ್ಕಾರ ಬೆಂಗಳೂರು, ನಾನು ಆರ್‌ಸಿಬಿ ತಂಡವನ್ನು ಸೇರಿಕೊಳ್ಳಲು ತುಂಬಾ ಉತ್ಸುಕನಾಗಿದ್ದೇನೆ. ಆರ್‌ಸಿಬಿ ತಂಡದ ಭಾಗವಾಗಿರುವುದಕ್ಕೆ ಸಂತಸವಾಗುತ್ತಿದೆ. ತಂಡದ ನಿರ್ವಾಹಕರಿಗೆ ಧನ್ಯವಾದಗಳು’ ಎಂದಿದ್ದಾರೆ.
‘ನನ್ನ ಮೇಲೆ ನಂಬಿಕೆ ಇಟ್ಟು, ನನ್ನನ್ನು ಖರೀದಿಸಿದ ಫ್ರಾಂಚೈಸಿ ಹಾಗೂ ತಂಡದ ಮ್ಯಾನೆಜ್‌ಮೆಂಟ್‌ಗೆ ಧನ್ಯವಾದಗಳು, ಮುಂದಿನ ಸೀಸನ್ ಅನ್ನು ಚಾಂಪಿಯನ್ ತಂಡದ ಭಾಗವಾಗಿ ಆಡುವುದಕ್ಕೆ ಬಹಳ ಸಂತೋಷವಾಗುತ್ತಿದೆ, ಪ್ಲೇ ಬೋಲ್ಡ್’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.