
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಬೇಕಿದ್ದ ವಿಜಯ್ ಹಜಾರೆ ಪಂದ್ಯಕ್ಕೆ ಪೊಲೀಸರು ಅನುಮತಿ ನಿರಾಕರಿಸಿರುವ ಹಿನ್ನೆಲೆಯಲ್ಲಿ ಈ ಪಂದ್ಯವನ್ನು ಬಿಸಿಸಿಐ ಶ್ರೇಷ್ಠತಾ ಕೇಂದ್ರಕ್ಕೆ (ಸಿಇಒ) ಸ್ಥಳಾಂತರಿಸಲಾಗಿದೆ.
ಈ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, 'ಎಲ್ಲಾ ಇಲಾಖೆಗಳ ವರದಿ ಆಧರಿಸಿ ಪಂದ್ಯ ನಡೆಸಲು ಅನುಮತಿ ಕೋರಿದ ಕೆಎಸ್‌ಸಿಎ ಮನವಿಯನ್ನು ತಿರಸ್ಕರಿಸಲಾಗಿದೆ' ಎಂದಿದ್ದರು.
ಡಿಸೆಂಬರ್ 24ರಂದು ವಿಜಯ್ ಹಜಾರೆ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯ ಡಿ ಗುಂಪಿನಲ್ಲಿ ದೆಹಲಿ ಮತ್ತು ಆಂಧ್ರ ತಂಡಗಳ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಿಗದಿಯಾಗಿತ್ತು.
ದೆಹಲಿ ತಂಡವನ್ನು ಪ್ರತಿನಿಧಿಸುತ್ತಿರುವ ವಿರಾಟ್ ಕೊಹ್ಲಿ ಈ ಪಂದ್ಯದಲ್ಲಿ ಭಾಗವಹಿಸಬೇಕಿತ್ತು.
ಪ್ರಸ್ತುತ ಪಂದ್ಯವನ್ನು ಬಿಸಿಸಿಐ ಸಿಇಒ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.