ಅಹಮದಾಬಾದ್: ವಿಜಯ್ ಹಜಾರೆ ಟ್ರೋಫಿ ಟೂರ್ನಿಯ ಸಿ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಮರಳುವ ಛಲದಲ್ಲಿರುವ ಕರ್ನಾಟಕ ತಂಡವು ಶುಕ್ರವಾರ ಸೌರಾಷ್ಟ್ರ ತಂಡವನ್ನು ಎದುರಿಸಲಿದೆ.
ಟೂರ್ನಿಯಲ್ಲಿ ಹ್ಯಾಟ್ರಿಕ್ ಶತಕ ಗಳಿಸಿರುವ ಮಯಂಕ್ ಅಗರವಾಲ್ ಮತ್ತು ತಲಾ ಒಂದು ಶತಕ ಹೊಡೆದಿರುವ ಆರ್. ಸ್ಮರಣ್ ಹಾಗೂ ಕೆ.ಎಲ್. ಶ್ರೀಜಿತ್ ಅವರು ಉತ್ತಮ ಲಯದಲ್ಲಿದ್ದಾರೆ. ಬೌಲಿಂಗ್‌ನಲ್ಲಿ ವಿ. ಕೌಶಿಕ್ ಉತ್ತಮ ಲಯದಲ್ಲಿದ್ದಾರೆ. ಉಳಿದ ಬೌಲರ್‌ಗಳು ಲಯಕ್ಕೆ ಮರಳಿದರೆ ತಂಡಕ್ಕೆ ಬಲ ಬರಲಿದೆ.
ಟೂರ್ನಿಯಲ್ಲಿ ಕರ್ನಾಟಕ ತಂಡವು 5 ಪಂದ್ಯಗಳನ್ನು ಆಡಿ 4ರಲ್ಲಿ ಜಯಿಸಿದೆ. ಕಳೆದ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ 3 ವಿಕೆಟ್‌ಗಳಿಂದ ಕರ್ನಾಟಕ ತಂಡವು ಸೋತಿತ್ತು. ಒಟ್ಟು 16 ಅಂಕ ಗಳಿಸಿದೆ. ಪಂಜಾಬ್ ತಂಡವೂ ಇಷ್ಠೇ ಅಂಕ ಗಳಿಸಿದ್ದು ಕರ್ನಾಟಕ ತಂಡಕ್ಕಿಂತ ಹೆಚ್ಚು ನೆಟ್ ರನ್ ರೇಟ್ ಹೊಂದಿದೆ. ಆದ್ದರಿಂದ ಪ್ರಥಮ ಸ್ಥಾನದಲ್ಲಿದೆ. ನಾಲ್ಕನೇ ಸ್ಥಾನದಲ್ಲಿರುವ ಸೌರಾಷ್ಟ್ರ ತಂಡವು 12 ಅಂಕ ಗಳಿಸಿದೆ. ಆದ್ದರಿಂದ ಈ ಪಂದ್ಯದಲ್ಲಿ ಜಯಿಸುವುದು ತಂಡಕ್ಕೆ ಮುಖ್ಯವಾಗಿದೆ.
ಪಂದ್ಯ ಆರಂಭ: ಬೆಳಿಗ್ಗೆ 9
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.