ADVERTISEMENT

ಇನ್‌ಸ್ಟಾಗ್ರಾಂನಲ್ಲಿ 5 ಕೋಟಿ ಹಿಂಬಾಲಕರನ್ನು ಹೊಂದಿದ ಮೊದಲ ಭಾರತೀಯ ಕೊಹ್ಲಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 8:05 IST
Last Updated 18 ಫೆಬ್ರುವರಿ 2020, 8:05 IST
   
""

ಬೆಂಗಳೂರು:ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರನ್ನು ಇನ್‌ಸ್ಟಾಗ್ರಾಂನಲ್ಲಿ ಹಿಂಬಾಲಿಸುವವರ ಸಂಖ್ಯೆ ಬರೋಬ್ಬರಿ 5 ಕೋಟಿ ದಾಟಿದೆ. ಆ ಮೂಲಕ ಕೊಹ್ಲಿ, ಇಷ್ಟು ಸಂಖ್ಯೆಯ ಫಾಲೋವರ್ಸ್‌ಗಳನ್ನು ಹೊಂದಿದ ಮೊದಲ ಭಾರತೀಯ ಎನಿಸಿದ್ದಾರೆ.

ಇದುವರೆಗೆ ಒಟ್ಟು 931 ಫೋಸ್ಟ್‌ಗಳನ್ನು ಪ್ರಕಟಿಸಿರುವ ಕೊಹ್ಲಿ, 148 ಜನರನ್ನು ಹಿಂಬಾಲಿಸುತ್ತಿದ್ದಾರೆ.

ಬಾಲಿವುಡ್‌ ನಟಿ ಪ್ರಿಯಾಂಕ ಚೋಪ್ರಾ ಅವರಿಗೆ 4 ಕೋಟಿ 99 ಲಕ್ಷಕ್ಕೂ ಹೆಚ್ಚು ಹಿಂಬಾಲಕರಿದ್ದು, ಭಾರತೀಯರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ದೀಪಿಕಾ ಪಡುಕೋಣೆ ಮೂರನೇ ಸ್ಥಾನದಲ್ಲಿದ್ದು, ಅವರಿಗೆ 4.41 ಕೋಟಿ ಹಿಂಬಾಲಕರಿದ್ದಾರೆ.

ADVERTISEMENT

ಪ್ರಧಾನಿ ನರೇಂದ್ರ ಮೋದಿ ಅವರನ್ನು3.4 ಕೋಟಿ ಜನರು ಹಿಂಬಾಲಿಸುತ್ತಿದ್ದಾರೆ.

ಒಟ್ಟಾರೆ ಅತಿಹೆಚ್ಚು ಹಿಂಬಾಲಕರು ಇರುವುದು ಫುಟ್‌ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ ಅವರಿಗೆ. ಅವರನ್ನು 20 ಕೋಟಿಗೂ ಹೆಚ್ಚು ಜನರು ಹಿಂಬಾಲಿಸುತ್ತಿದ್ದಾರೆ.ಅಮೆರಿಕದ ಗಾಯಕಿ ಎರಿಯಾನ ಗ್ರಾಂಡೆ (17.5 ಕೋಟಿ) ನಂತರದ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.