ADVERTISEMENT

Virat Kohli Record: ಸಂಗಕ್ಕರ ದಾಖಲೆ ಮುರಿದು ಸಚಿನ್ ಸನಿಹಕ್ಕೆ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಜನವರಿ 2026, 14:39 IST
Last Updated 11 ಜನವರಿ 2026, 14:39 IST
<div class="paragraphs"><p>ವಿರಾಟ್ ಕೊಹ್ಲಿ</p></div>

ವಿರಾಟ್ ಕೊಹ್ಲಿ

   

(ಚಿತ್ರ ಕೃಪೆ: ಬಿಸಿಸಿಐ)

ವಡೋದರ: 'ರನ್ ಮೆಶಿನ್' ಖ್ಯಾತಿಯ ಭಾರತ ಕ್ರಿಕೆಟ್ ತಂಡದ ಆಟಗಾರ ವಿರಾಟ್ ಕೊಹ್ಲಿ, ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 28 ಸಾವಿರ ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ.

ADVERTISEMENT

ಅಷ್ಟೇ ಅಲ್ಲದೆ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಅವರ ದಾಖಲೆ ಮುರಿದಿರುವ ವಿರಾಟ್, ದಿಗ್ಗಜ ಸಚಿನ್ ತೆಂಡೂಲ್ಕರ್ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.

ವಡೋದರದಲ್ಲಿ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕುಮಾರ ಸಂಗಕ್ಕರ ಒಟ್ಟು 28,016 ರನ್ ಗಳಿಸಿದ್ದರು. ಈ ದಾಖಲೆಯನ್ನೀಗ ಕೊಹ್ಲಿ ಮುರಿದಿದ್ದಾರೆ. ಆ ಮೂಲಕ ಸಚಿನ್ ತೆಂಡೂಲ್ಕರ್ ಸನಿಹಕ್ಕೆ ತಲುಪಿದ್ದಾರೆ.

ರನ್ ಬೇಟೆಯಲ್ಲಿ ಅಗ್ರಸ್ಥಾನದಲ್ಲಿರುವ ಸಚಿನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 34,357 ರನ್ ಗಳಿಸಿದ್ದಾರೆ.

624ನೇ ಇನಿಂಗ್ಸ್‌ನಲ್ಲಿ ಕೊಹ್ಲಿ 28 ಸಾವಿರ ರನ್‌ಗಳ ಮೈಲಿಗಲ್ಲು ತಲುಪಿದ್ದಾರೆ. ಅಲ್ಲದೆ ವೇಗದಲ್ಲಿ ಈ ಸಾಧನೆ ಮಾಡಿದ ಬ್ಯಾಟರ್ ಎನಿಸಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಾಧಕರು:

  • ಸಚಿನ್ ತೆಂಡೂಲ್ಕರ್: 34,357

  • ವಿರಾಟ್ ಕೊಹ್ಲಿ: 28,017

  • ಕುಮಾರ ಸಂಗಕ್ಕರ: 28,016

  • ರಿಕಿ ಪಾಂಟಿಂಗ್: 27,483

  • ಮಹೇಲಾ ಜಯವರ್ಧನೆ: 25,957

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.