ADVERTISEMENT

IND vs AUS | ಆಸೀಸ್ ವಿರುದ್ಧ ಆಕರ್ಷಕ ಅರ್ಧಶತಕ: ಸಚಿನ್ ದಾಖಲೆ ಮುರಿದ ವಿರಾಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಅಕ್ಟೋಬರ್ 2025, 11:35 IST
Last Updated 25 ಅಕ್ಟೋಬರ್ 2025, 11:35 IST
<div class="paragraphs"><p>ವಿರಾಟ್,&nbsp;ಸಚಿನ್ </p></div>

ವಿರಾಟ್, ಸಚಿನ್

   

ICC

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡಿದ್ದ ವಿರಾಟ್ ಕೊಹ್ಲಿ ಅಂತಿಮ ಏಕದಿನ ಪಂದ್ಯದಲ್ಲಿ ಫಾರ್ಮ್‌ಗೆ ಮರಳಿದ್ದಾರೆ. ಮಾತ್ರವಲ್ಲ, ಇಂದಿನ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಈ ಅರ್ಧಶತಕದ ನೆರವಿನಿಂದ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯೊಂದನ್ನು ಕೊಹ್ಲಿ ಮುರಿದಿದ್ದಾರೆ.

ADVERTISEMENT

ಗುರಿ ಬೆನ್ನಟ್ಟುವಾಗ ಅತೀ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ಸ್

ಏಕದಿನ ಕ್ರಿಕೆಟ್‌ನಲ್ಲಿ ಗುರಿ ಬೆನ್ನಟ್ಟುವಾಗ ಅತೀ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ಸ್ ಹೊಡೆದ ದಾಖಲೆ ಹೊಂದಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಹಿಂದಿಕ್ಕಿದ್ದಾರೆ. ಆ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಗುರಿ ಬೆನ್ನಟ್ಟುವಾಗ ಅತೀ ಹೆಚ್ಚು ಬಾರಿ 50ಕ್ಕೂ ಅಧಿಕ ರನ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾದರು.

ಏಕದಿನ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಗುರಿ ಬೆನ್ನಟ್ಟುವಾಗ ವಿರಾಟ್ ಕೊಹ್ಲಿ 70 ಬಾರಿ 50ಕ್ಕೂ ಅಧಿಕ ರನ್ ಬಾರಿ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. 69 ಬಾರಿ ಈ ಸಾಧನೆ ಮಾಡಿರುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಈ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿ ಭಾರತದ ರೋಹಿತ್ ಶರ್ಮಾ ಇದ್ದು, ಅವರು 55 ಬಾರಿ ಈ ಸಾಧನೆ ಮಾಡಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಇದ್ದು, ಅವರು 50 ಬಾರಿ ಈ ಸಾಧನೆ ಮಾಡಿದ್ದಾರೆ ಹಾಗೂ 46 ಬಾರಿ ಈ ಸಾಧನೆ ಮಾಡರುವ ಕ್ರಿಸ್ ಗೇಲ್ ಐದನೇ ಸ್ಥಾನದಲ್ಲಿದ್ದಾರೆ.

ಏಕದಿನ + ಟಿ20 ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್

ಇದರ ಜೊತೆಗೆ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಏಕದಿನ ಹಾಗೂ ಟಿ20 ಕ್ರಿಕೆಟ್‌ ಎರಡೂ ಮಾದರಿಗಳಿಂದ ಅತೀ ಹೆಚ್ಚು ರನ್ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದಾರೆ. ಈ ಎರಡೂ ಮಾದರಿಗಳಿಂದ ಸಚಿನ್ 18,436 ರನ್‌ ಕಲೆಹಾಕಿದ್ದರೆ, ವಿರಾಟ್ ಕೊಹ್ಲಿ 18,437 ರನ್ ಕಲೆಹಾಕುವ ಮೂಲಕ ಅಗ್ರಸ್ಥಾನಕ್ಕೇರಿದರು.

ಈ ಪಟ್ಟಿಯಲ್ಲಿ 15,616 ರನ್ ಗಳಿಸಿರುವ ಕುಮಾರ ಸಂಗಕ್ಕರ ಮೂರನೇ ಸ್ಥಾನ, 15,589 ರನ್ ಗಳಿಸಿರುವ ರೋಹಿತ್ ಶರ್ಮಾ ನಾಲ್ಕು ಮತ್ತು 14,143 ರನ್ ಗಳಿಸಿರುವ ಮಹೇಲಾ ಜಯವರ್ಧನೆ ಐದನೇ ಸ್ಥಾನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.