ADVERTISEMENT

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ಸ್: ಸಂಗಕ್ಕರ ದಾಖಲೆ ಮುರಿದ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಅಕ್ಟೋಬರ್ 2025, 10:47 IST
Last Updated 25 ಅಕ್ಟೋಬರ್ 2025, 10:47 IST
<div class="paragraphs"><p>ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್–ಕೊಹ್ಲಿ ಬ್ಯಾಟಿಂಗ್ ವೈಖರಿ</p></div>

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ರೋಹಿತ್–ಕೊಹ್ಲಿ ಬ್ಯಾಟಿಂಗ್ ವೈಖರಿ

   

ಚಿತ್ರ: @SelflessCricket

ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡಿದ್ದ ವಿರಾಟ್ ಕೊಹ್ಲಿ ಅಂತಿಮ ಏಕದಿನ ಪಂದ್ಯದಲ್ಲಿ ಲಯಕ್ಕೆ ಮರಳಿದ್ದಾರೆ. ತಮ್ಮ ಸೊಗಸಾದ ಬ್ಯಾಟಿಂಗ್ ಮೂಲಕ ಶ್ರೀಲಂಕಾದ ಮಾಜಿ ನಾಯಕ ಕುಮಾರ ಸಂಗಕ್ಕರ ಅವರ ಹೆಸರಿನಲ್ಲಿದ್ದ ಅತೀ ಹೆಚ್ಚು ರನ್‌ಗಳ ದಾಖಲೆಯನ್ನು ಮುರಿದಿದ್ದಾರೆ.

ADVERTISEMENT

ಅತಿ ಹೆಚ್ಚು ರನ್ಸ್

ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಈಗ ಎರಡನೇ ಸ್ಥಾನಕ್ಕೇರಿದ್ದಾರೆ. ಆ ಮೂಲಕ ಕುಮಾರ್ ಸಂಗಕ್ಕರ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಮುರಿದಿದ್ದಾರೆ. ವಿರಾಟ್, 32ನೇ ಓವರ್‌ನ 3ನೇ ಎಸೆತದಲ್ಲಿ 1 ರನ್ ಕಲೆಹಾಕುವ ಮೂಲಕ ಕುಮಾರ ಸಂಗಕ್ಕರ ಅವರ 14,234 ರನ್ ದಾಖಲೆಯನ್ನು ಸರಿಗಟ್ಟಿದರು.

ಏಕದಿನ ಕ್ರಿಕೆಟ್‌ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದಾರೆ. ಅವರು 452 ಏಕದಿನ ಇನಿಂಗ್ಸ್‌ಗಳಿಂದ 18,426 ರನ್ ಗಳಿಸಿದ್ದಾರೆ. ಇದರಲ್ಲಿ 49 ಶತಕ ಹಾಗೂ 96 ಅರ್ಧಶತಕ ಸೇರಿವೆ.

ವಿರಾಟ್ ಕೊಹ್ಲಿ 293 ಇನಿಂಗ್ಸ್‌ಗಳಲ್ಲಿ 14,255* ರನ್ಸ್ ಗಳಿಸುವ ಮೂಲಕ ಎರಡನೇ ಸ್ಥಾನಕ್ಕೇರಿದ್ದಾರೆ. ಇದರಲ್ಲಿ 51 ಶತಕ ಹಾಗೂ 75 ಅರ್ಧಶತಕಗಳು ಸೇರಿವೆ.

ಮೂರನೇ ಸ್ಥಾನದಲ್ಲಿ 14,234 ರನ್ಸ್ ಗಳಿಸಿರುವ ಶ್ರೀಲಂಕಾದ ಕುಮಾರ ಸಂಗಕ್ಕರ ಇದ್ದಾರೆ. ಅವರು ಕೂಡ 25 ಶತಕ ಹಾಗೂ 93 ಅರ್ಧಶತಕ ಸಿಡಿಸಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ 365 ಇನಿಂಗ್ಸ್‌ಗಳಲ್ಲಿ 13,704 ರನ್ ಕಲೆಹಾಕುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅವರು 30 ಶತಕ ಹಾಗೂ 82 ಅರ್ಧಶತಕ ಸಿಡಿಸಿದ್ದಾರೆ.

ಐದನೇ ಸ್ಥಾನದಲ್ಲಿ ಶ್ರೀಲಂಕಾದ ಸನತ್ ಜಯಸೂರ್ಯ ಇದ್ದು, ಇವರು 433 ಇನಿಂಗ್ಸ್‌ಗಳಲ್ಲಿ 13,430 ರನ್‌ ಗಳಿಸಿದ್ದಾರೆ. ಇದರಲ್ಲಿ ಅವರು, 28 ಶತಕ ಹಾಗೂ 6 ಅರ್ಧಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.