ADVERTISEMENT

IPL ಕ್ರಿಕೆಟ್‌: ಕೊಹ್ಲಿ, ಗಂಭೀರ್ ನಡುವೆ ಮಾತಿನ ಚಕಮಕಿ; ಈ ವಾಗ್ವಾದಕ್ಕೆ ಕಾರಣವೇನು?

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಮೇ 2023, 4:37 IST
Last Updated 2 ಮೇ 2023, 4:37 IST
 ಕೊಹ್ಲಿ, ಗಂಬೀರ್‌, ನಡುವೆ ಮಾತಿನ ಚಕಮಕಿ
ಕೊಹ್ಲಿ, ಗಂಬೀರ್‌, ನಡುವೆ ಮಾತಿನ ಚಕಮಕಿ   

ಲಖನೌ: ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರಾಟ್‌ ಕೊಹ್ಲಿ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡ ಮೆಂಟರ್‌ ಗೌತಮ್ ಗಂಭೀರ್ ನಡುವೆ ವಾಗ್ವಾದ ನಡೆದಿದೆ.

ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಜಯ ದಾಖಲಿಸಿತು. ಆ ಬಳಿಕ ನಡೆದ ಆಟಗಾರರ ನಡುವಿನ ಹಸ್ತಲಾಘವದ ವೇಳೆ ಕೊಹ್ಲಿ ಹಾಗೂ ಗಂಭೀರ್ ನಡುವೆ ಮಾತಿನ ಚಕಮಕಿ ನಡೆದಿದೆ.

ಪಂದ್ಯದ ಬಳಿಕ ಇಬ್ಬರು ಆಟಗಾರರು ಪರಸ್ಪರ ಬೈದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಉಭಯ ತಂಡಗಳ ಆಟಗಾರರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ. ಇವರ ಜಗಳದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ADVERTISEMENT

ಮಾತಿನ ಚಕಮಕಿಗೆ ಕಾರಣವೇನು?

ಏಪ್ರಿಲ್‌ 10ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಖನೌ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಲಖನೌ ಒಂದು ವಿಕೆಟ್‌ ಜಯ ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ಗಂಭೀರ್ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಲಖನೌದ ಕೃಣಾಲ್‌ ಪಾಂಡ್ಯ ಔಟಾದ ಬಳಿಕ ವಿರಾಟ್‌ ಕೊಹ್ಲಿ ಆರ್‌ಸಿಬಿ ಅಭಿಮಾನಿಗಳತ್ತ ತಿರುಗಿ, ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಬಾಯಿ ಮುಚ್ಕೊಂಡಿರಬೇಡಿ ಎನ್ನುವ ಮೂಲಕ ಗಮನ ಸೆಳೆದರು.

ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃಣಾಲ್‌ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿ, ಆರ್‌ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಡಿ ಎಂದು ಸನ್ನೆ ಮಾಡಿದ್ದರು.

ಇದೇ ವಿಷಯವಾಗಿ ಗಂಭೀರ್ ಹಾಗೂ ವಿರಾಟ್ ಕೊಹ್ಲಿಯ ನಡುವೆ ಮಾತಿನ ಚಕಮಕಿ ನಡೆದಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. 

ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ ತಂಡವನ್ನು ಲಖನೌ ಸ್ಪಿನ್ನರ್‌ಗಳು 20 ಓವರುಗಳಲ್ಲಿ 9 ವಿಕೆಟ್‌ಗೆ 126 ರನ್‌ಗಳಿಗೆ ನಿಯಂತ್ರಿಸಿದರು. ನಂತರ ಬೆಂಗಳೂರು ತಂಡದ ಬೌಲರ್‌ಗಳು ಸಹ ಪರಿಣಾಮಕಾರಿ ದಾಳಿ ನಡೆಸಿ ಲಖನೌ ಸೂಪರ್‌ ಜೈಂಟ್ಸ್‌ ತಂಡವನ್ನು 108 ರನ್‌ಗಳಿಗೆ ಆಲೌಟ್‌ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.