ADVERTISEMENT

IPL: ಮಾನಸಿಕ ಒತ್ತಡದಲ್ಲಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ಅಗತ್ಯ -ರವಿಶಾಸ್ತ್ರಿ

ಪಿಟಿಐ
Published 20 ಏಪ್ರಿಲ್ 2022, 9:01 IST
Last Updated 20 ಏಪ್ರಿಲ್ 2022, 9:01 IST
ವಿರಾಟ್‌ ಕೊಹ್ಲಿ ಮತ್ತು ರವಿಶಾಸ್ತ್ರಿ –ಪಿಟಿಐ ಚಿತ್ರ
ವಿರಾಟ್‌ ಕೊಹ್ಲಿ ಮತ್ತು ರವಿಶಾಸ್ತ್ರಿ –ಪಿಟಿಐ ಚಿತ್ರ   

ಮುಂಬೈ:ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರು ದೇಶಕ್ಕಾಗಿ ಇನ್ನು ಕನಿಷ್ಠ ಆರರಿಂದ ಏಳು ವರ್ಷಗಳವರೆಗೂ ಆಡಬೇಕಾದರೆ, ವಿರಾಮ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್‌ ಸಂದರ್ಶನದಲ್ಲಿ ಮಾತನಾಡಿರುವ ರವಿಶಾಸ್ತ್ರಿ, ‘ಸದ್ಯದ ಪರಿಸ್ಥಿತಿಯಲ್ಲಿ ಯಾರಿಗಾದರೂ ವಿರಾಮ ಬೇಕಿದೆ ಎಂದಾದರೆ, ಅದು ಮಾನಸಿಕ ಒತ್ತಡದಲ್ಲಿರುವ ವಿರಾಟ್‌ ಕೊಹ್ಲಿಗೆ’ ಎಂದು ಹೇಳಿದ್ದಾರೆ.

ಕೋವಿಡ್‌ ನಿರ್ಬಂಧಗಳ ನಡುವೆ ಐಪಿಎಲ್ ಬಯೋಬಬಲ್‌ನಲ್ಲಿರುವ ಕೊಹ್ಲಿ ಎಚ್ಚರಿಕೆಯಿಂದ ಆಡುವುದು ಅಗತ್ಯವಿದೆ ಎಂದು ಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ವಿರಾಟ್ ಕೊಹ್ಲಿ, ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಲು ಪರದಾಡುತ್ತಿದ್ದಾರೆ.

ಲಖನೌ ಸೂಪರ್ ಜೈಂಟ್ಸ್‌ ವಿರುದ್ಧ ಮಂಗಳವಾರ ನಡೆದ ಐಪಿಎಲ್ ಪಂದ್ಯಗಳಲ್ಲಿ ನಾಯಕ ಫಫ್ ಡುಪ್ಲೆಸಿ ಅಮೋಘ ಬ್ಯಾಟಿಂಗ್ ಮತ್ತು ಜೋಶ್ ಹ್ಯಾಜಲ್‌ವುಡ್ ಚಾಣಾಕ್ಷ ಬೌಲಿಂಗ್‌ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಜಯಭೇರಿ ಬಾರಿಸಿತ್ತು.

ಈ ಖುತುವಿನಲ್ಲಿ ಆರ್‌ಸಿಬಿ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದು, ಎರಡರಲ್ಲಿ ಸೋಲು ಕಂಡಿದೆ. ಸದ್ಯ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.

ಏ.23ರಂದು ಆರ್‌ಸಿಬಿ– ಸನ್‌ರೈಸರ್ಸ್‌ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.