ADVERTISEMENT

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ: ಕೊಹ್ಲಿ, ಬೂಮ್ರಾಗೆ ವಿಶ್ರಾಂತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜುಲೈ 2022, 9:23 IST
Last Updated 14 ಜುಲೈ 2022, 9:23 IST
ಜಸ್‌ಪ್ರೀತ್‌ ಬೂಮ್ರಾ ಮತ್ತು ವಿರಾಟ್ ಕೊಹ್ಲಿ
ಜಸ್‌ಪ್ರೀತ್‌ ಬೂಮ್ರಾ ಮತ್ತು ವಿರಾಟ್ ಕೊಹ್ಲಿ   

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಿಂದ ಖ್ಯಾತ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಜಸ್‌ಪ್ರೀತ್ ಬೂಮ್ರಾ ವಿಶ್ರಾಂತಿ ಪಡೆದಿದ್ದಾರೆ.

2019ರ ನವೆಂಬರ್ ಬಳಿಕ ಕ್ರಿಕೆಟ್‌ನ ಯಾವುದೇ ಮಾದರಿಯಲ್ಲಿಯೂ ಕೊಹ್ಲಿ ಒಂದೇ ಒಂದು ಶತಕ ದಾಖಲಿಸಿಲ್ಲ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿಲ್ಲ.

ಕೊಹ್ಲಿ ಫಾರ್ಮ್ ಬಗ್ಗೆ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಮಧ್ಯೆಯೇ, ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ADVERTISEMENT

ಭಾರತದ ವೇಗಿ ಜಸ್‌ಪ್ರೀತ್ ಬೂಮ್ರಾ ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಮಂಗಳವಾರ ನಡೆದ ಇಂಗ್ಲೆಂಡ್‌ ಎದುರಿನ ಪಂದ್ಯದಲ್ಲಿ ಅವರು ತಮ್ಮ ಜೀವನಶ್ರೇಷ್ಠ (19ಕ್ಕೆ6) ಸಾಧನೆ ಮಾಡಿದ್ದರು.

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯು ಜುಲೈ 29 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 7 ರವರೆಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.