ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು, ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ವಿರಾಟ್ ಸಾಧನೆ ಹೀಗಿದೆ.
2011ರಲ್ಲಿ (ವೆಸ್ಟ್ ಇಂಡೀಸ್ ವಿರುದ್ಧ) ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಅವರು ಈವರೆಗೆ 123 ಪಂದ್ಯಗಳ 210 ಇನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿದ್ದಾರೆ. 46.85ರ ಸರಾಸರಿಯಲ್ಲಿ 9,230 ರನ್ ಗಳಿಸಿರುವ ಅವರ ಬ್ಯಾಟ್‌ನಿಂದ 7 ದ್ವಿಶತಕ, 30 ಶತಕ, 31 ಅರ್ಧಶತಕಗಳು ಬಂದಿವೆ.
2025 ಜನವರಿ 3ರಂದು ಆಸ್ಟ್ರೇಲಿಯಾದ ಸಿಡ್ನಿ ಮೈದಾನದಲ್ಲಿ ಕೊನೆಯ ಟೆಸ್ಟ್ ಪಂದ್ಯವಾಡಿದ್ದರು. ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಕೊಹ್ಲಿ ಮುನ್ನಡೆಸಿದ್ದಾರೆ.
ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಆಡಿದ 68ರಲ್ಲಿ, 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 17 ಪಂದ್ಯಗಳಲ್ಲಿ ಸೋಲನುಭವಿಸಿದೆ. ಇನ್ನು 11 ಪಂದ್ಯಗಳಲ್ಲಿ ಭಾರತ ತಂಡ ಡ್ರಾ ಸಾಧಿಸಿದೆ. ಈ ಮೂಲಕ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ಗೆ 'ಕಿಂಗ್' ಕೊಹ್ಲಿ ವಿದಾಯ | |
---|---|
ಪದಾರ್ಪಣೆ: | 2011 ಜೂನ್ 20-23 Vs ವೆಸ್ಟ್ ಇಂಡೀಸ್ |
ಕೊನೆಯ ಟೆಸ್ಟ್: | 2025 ಜನವರಿ 03-05 Vs ಆಸ್ಟ್ರೇಲಿಯಾ |
ವಿರಾಟ್ ಟೆಸ್ಟ್ ಸಾಧನೆ | |
ಟೆಸ್ಟ್ ಪಂದ್ಯಗಳು | 123 |
ಇನ್ನಿಂಗ್ಸ್ | 210 |
ನಾಟೌಟ್ | 13 |
ರನ್ | 9230 |
ಗರಿಷ್ಠ ರನ್ | 254* |
ಸರಾಸರಿ | 46.85 |
ಸ್ಟ್ರೈಕ್ ರೇಟ್ | 55.57 |
ದ್ವಿಶತಕ | 7 |
ಶತಕ | 30 |
ಅರ್ಧಶತಕ | 31 |
ಬೌಂಡರಿ | 1027 |
ಸಿಕ್ಸರ್ | 30 |
ಕ್ಯಾಚ್ | 121 |
2011ರಲ್ಲಿ (ವೆಸ್ಟ್ ಇಂಡೀಸ್ ವಿರುದ್ಧ) ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ಅವರು ಈವರೆಗೆ 123 ಪಂದ್ಯಗಳ 210 ಇನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿದ್ದಾರೆ. 46.85ರ ಸರಾಸರಿಯಲ್ಲಿ 9,230 ರನ್ ಗಳಿಸಿರುವ ಅವರ ಬ್ಯಾಟ್‌ನಿಂದ 7 ದ್ವಿಶತಕ, 30 ಶತಕ, 31 ಅರ್ಧಶತಕಗಳು ಬಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.