ADVERTISEMENT

ಗಾನ ಕೋಗಿಲೆ ಲತಾ ಮಂಗೇಶ್ಕರ್‌ ನಿಧನ: ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2022, 7:42 IST
Last Updated 6 ಫೆಬ್ರುವರಿ 2022, 7:42 IST
ಲತಾ ಮಂಗೇಶ್ಕರ್‌
ಲತಾ ಮಂಗೇಶ್ಕರ್‌    

ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವ ʼಭಾರತ ರತ್ನʼ ಪುರಸ್ಕೃತೆ,ಖ್ಯಾತ ಗಾಯಕಿ ಲತಾ ಮಂಗೇಶ್ಕರ್‌ (92) ಅವರು ಇಂದು (ಫೆ.06) ನಿಧನರಾಗಿದ್ದಾರೆ.

ಕೋವಿಡ್-19 ಹಾಗೂ ನ್ಯೂಮೋನಿಯಾ ದೃಢಪಟ್ಟ ಹಿನ್ನೆಲೆಯಲ್ಲಿ‌, ಲತಾ ಮಂಗೇಶ್ಕರ್‌ ಅವರನ್ನು ಜನವರಿ 8ರಂದುಮುಂಬೈನ ಆಸ್ಪತ್ರೆಯೊಂದಕ್ಕೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ(ಐಸಿಯು) ಚಿಕಿತ್ಸೆ ನೀಡಲಾಗುತ್ತಿತ್ತು.

ಕೋವಿಡ್‌ನಿಂದ ಚೇತರಿಸಿಕೊಂಡಿದ್ದರಾದರೂ, ಶನಿವಾರ(ಫೆ.05) ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಅವರಿಗೆ ವೆಂಟಿಲೇಟರ್‌ ನೆರವು ನೀಡಲಾಗಿತ್ತು.

ADVERTISEMENT

ಲತಾ ಮಂಗೇಶ್ಕರ್‌ನಿಧನಕ್ಕೆ ಪ್ರಪಂಚದಾದ್ಯಂತ ಇರುವ ಅವರ ಅಭಿಮಾನಿಗಳು, ರಾಜಕೀಯ ನಾಯಕರು ಸೇರಿದಂತೆ ವಿವಿಧ ಕ್ಷೇತ್ರಗಳಗಣ್ಯರು ಕಂಬನಿ ಮಿಡಿದಿದ್ದಾರೆ.

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಟ್ವಿಟರ್‌ ಮೂಲಕ ಸಂತಾಪ ಸೂಚಿಸಿದ್ದು, ಲತಾ ಮಂಗೇಶ್ಕರ್ ಅವರ ಮಧುರ ಧ್ವನಿಯು ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ಮುಟ್ಟಿದೆಎಂದು ಬರೆದುಕೊಂಡಿದ್ದಾರೆ.

ʼಲತಾ ಜೀ ನಿಧನದ ಸುದ್ದಿ ಕೇಳಿ ಅಪಾರ ದುಃಖವಾಗಿದೆ. ಅವರ ಮಧುರ ಧ್ವನಿಯು ಪ್ರಪಂಚದ ಲಕ್ಷಾಂತರ ಜನರನ್ನು ತಲುಪಿದೆ. ಎಲ್ಲ ಗಾಯನ ಮತ್ತು ನೆನಪುಗಳನ್ನು ನೀಡಿದ್ದಕ್ಕೆ ನಿಮಗೆ ಧನ್ಯವಾದಗಳು. ಅವರ ಕುಟುಂಬ ಮತ್ತು ಪ್ರೀತಿಸುವವರಿಗೆ ನನ್ನ‌ಸಂತಾಪಗಳು ಎಂದುಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್‌ ಅವರು, ಹೃದಯ ಪೂರ್ವಕ ಸಂತಾಪಗಳನ್ನು ತಿಳಿಸಿದ್ದಾರೆ.

ನಿಮ್ಮ ಧ್ವನಿಯು ನಮ್ಮ ಆತ್ಮವನ್ನು ಮಟ್ಟಿದೆ ಮತ್ತು ಅದನ್ನು ಸಂತಸಪಡಿಸಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ. ನಿಮ್ಮಪರಂಪರೆಯು ಮುಂದಿನ ತಲೆಮಾರುಗಳಿಗೆ ಪ್ರೋತ್ಸಾಹ ನೀಡಲಿದೆ ಎಂದು ಶಿಖರ್‌ ಧವನ್‌ ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.