ADVERTISEMENT

ಭಾರತ ಟೆಸ್ಟ್​ ತಂಡದ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ವಿದಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಜನವರಿ 2022, 15:53 IST
Last Updated 15 ಜನವರಿ 2022, 15:53 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ    

ನವದೆಹಲಿ: ಭಾರತ ಟೆಸ್ಟ್‌ ತಂಡದ ನಾಯಕತ್ವಕ್ಕೆ ವಿರಾಟ್ ಕೊಹ್ಲಿ ಶನಿವಾರ ವಿದಾಯ ಹೇಳಿದ್ದಾರೆ.

ಕೇಪ್ ಟೌನ್‌ನಲ್ಲಿ ದಕ್ಷಿಣ ಆಪ್ರಿಕಾ ವಿರುದ್ಧ ನಡೆದ ಮೂರನೇ ಟೆಸ್ಟ್‌ನಲ್ಲಿ ಭಾರತವು ಪರಾಭವಗೊಂಡ ನಂತರ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ವಿರಾಟ್‌ ಕೊಹ್ಲಿ ಅವರು 68 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನೆಡೆಸಿದ್ದರು. 40 ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ಸಾಧಿಸಿತ್ತು. 17 ಟೆಸ್ಟ್‌ಗಳಲ್ಲಿ ಪರಾಭವಗೊಂಡಿದ್ದು, 11 ಪಂದ್ಯಗಳು ಡ್ರಾನಲ್ಲಿ ಕೊನೆಗೊಂಡಿದ್ದವು.

ADVERTISEMENT

ಎರಡು ತಿಂಗಳ ಹಿಂದೆ ವಿರಾಟ್‌ ಅವರು ಟಿ20 ಹಾಗೂ ಏಕದಿನ ಕ್ರಿಕೆಟ್‌ನ ನಾಯಕತ್ವವನ್ನು ತ್ಯಜಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.