ADVERTISEMENT

34ನೇ ವಸಂತಕ್ಕೆ ಕಾಲಿಟ್ಟ ‘ಕಿಂಗ್’ ಕೊಹ್ಲಿ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ನವೆಂಬರ್ 2022, 5:11 IST
Last Updated 5 ನವೆಂಬರ್ 2022, 5:11 IST
ವಿರಾಟ್‌ ಕೊಹ್ಲಿ
ವಿರಾಟ್‌ ಕೊಹ್ಲಿ   

ಬೆಂಗಳೂರು: ಟೀಮ್‌ ಇಂಡಿಯಾದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಅವರಿಗೆ ಇಂದು (ಶನಿವಾರ) 34ನೇ ಹುಟ್ಟುಹಬ್ಬದ ಸಂಭ್ರಮ.

ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಹಿರಿಯ ಕ್ರಿಕೆಟಿಗರು, ಅಂತರರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ), ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ), ಐಪಿಎಲ್‌ ಫ್ರಾಂಚೈಸಿ ಆರ್‌ಸಿಬಿ ಸೇರಿದಂತೆ ಅನೇಕ ಅಭಿಮಾನಿಗಳು ಶುಭ ಕೋರಿದ್ದಾರೆ.

ಟೀಮ್ ಇಂಡಿಯಾದ ಮಾಜಿ ನಾಯಕ ಮತ್ತು ಅತ್ಯುತ್ತಮ ಬ್ಯಾಟರ್‌ಗಳಲ್ಲಿ ಒಬ್ಬರಾದ ವಿರಾಟ್‌ ಕೊಹ್ಲಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬಿಸಿಸಿಐ ಟ್ವೀಟ್ ಮಾಡಿದೆ.

ADVERTISEMENT

ವಿಶ್ವ ಕ್ರಿಕೆಟ್‌ನ ಅತ್ಯಂತ ನಿರ್ಭೀತ ಆಟಗಾರರಲ್ಲಿ ಒಬ್ಬರಾದ ‘ನಮ್ಮ ವಿರಾಟ ರಾಜ’ನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಆರ್‌ಸಿಬಿ ಟ್ವೀಟ್ ಮಾಡಿದ್ದಾರೆ.

ಜನ್ಮದಿನದ ಶುಭಾಶಯಗಳು ಸಹೋದರ, ನಿಮಗೆ ಯಾವಾಗಲೂ ಒಳ್ಳೆಯದಾಗಲಿ ಎಂದು ಹಾರೈಸುತ್ತೇನೆ ಎಂದು ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಟ್ವೀಟ್ ಮಾಡಿದ್ದಾರೆ.

ವಿರಾಟ್ ಕೊಹ್ಲಿ ಅವರಿಗೆ ಜನ್ಮದಿನದ ಶುಭಾಶಯಗಳು ಎಂದು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಐಯ್ಯರ್ ಟ್ವೀಟ್ ಮಾಡಿದ್ದಾರೆ.

ಯಾರೊಬ್ಬರೂ ನಂಬದಿದ್ದಾಗ ನಂಬಿಕೆ ಇಟ್ಟಿದ್ದು ಕೊಹ್ಲಿ.ಅವರಿಗೆಜನ್ಮದಿನದ ಶುಭಾಶಯಗಳು ಎಂದು ಟೀಮ್ ಇಂಡಿಯಾದ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಕ್ರಿಕೆಟ್‌ ದಂತಕಥೆಗೆ (ಕೊಹ್ಲಿ) ಜನ್ಮದಿನದ ಶುಭಾಶಯಗಳು. ಟಿ20 ವಿಶ್ವಕಪ್ ಟ್ರೋಫಿಯೊಂದಿಗೆ ತವರಿಗೆ ತನ್ನಿ ಎಂದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಮೂರು ಮಾದರಿಗಳಲ್ಲಿ 477 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಕೊಹ್ಲಿ, 24,350 ರನ್‌ಗಳನ್ನು ಗಳಿಸಿದ್ದಾರೆ. ಜತೆಗೆ, 2011ರ ಏಕದಿನ ವಿಶ್ವಕಪ್, 2013ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲುವಿಗೆ ಪ್ರಮುಖ ಪಾತ್ರವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.