ನವದೆಹಲಿ: ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರು ಭಾರತಕ್ಕೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಎಂದು ಟೆಸ್ಟ್ ತಂಡದ ನಾಯಕ ಶುಭಮನ್ ಗಿಲ್ ಹೇಳಿದ್ದಾರೆ.
ಭಾನುವಾರದಿಂದ(ಅ.19) ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಶುಭಮನ್ ಗಿಲ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ರೋಹಿತ್ ಹಾಗೂ ವಿರಾಟ್ ಅವರು ಕಳೆದ 10–15 ವರ್ಷಗಳಿಂದ ಭಾರತದ ಪರ ಆಡುತ್ತಿದ್ದಾರೆ. ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಪಂದ್ಯಗಳನ್ನು ಗೆಲ್ಲುವುದು ಅನುಭವ ನೀಡುತ್ತದೆ. ಪ್ರತಿಯೊಬ್ಬ ನಾಯಕ ಕೂಡ ಈ ರೀತಿಯ ಆಟಗಾರರು ತಂಡದಲ್ಲಿರುವುದನ್ನು ಬಯಸುತ್ತಾರೆ ಎಂದು ಹೇಳಿದ್ದಾರೆ.
ಕಳೆದ 2–3 ವರ್ಷಗಳಿಂದಲೂ ನಾವು ಏಕದಿನ ಕ್ರಿಕೆಟ್‌ನಲ್ಲಿ ಅತ್ಯುತ್ತಮವಾಗಿ ಆಡುತ್ತಿದ್ದೇವೆ. ನಮ್ಮ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ, ಅದೇ ತಂಡವಾಗಿಯೇ ಆಸ್ಟ್ರೇಲಿಯಾ ವಿರುದ್ಧವೂ ಕಣಕ್ಕಿಳಿಯಲಿದ್ದೇವೆ ಎಂದು ಹೇಳಿದ್ದಾರೆ.
ಫೆಬ್ರುವರಿ ನಂತರ ರೋಹಿತ್ ಹಾಗೂ ವಿರಾಟ್ ಅವರು ಅಂತರರಾಷ್ಟ್ರೀಯ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.