ADVERTISEMENT

ಬೈಕ್ ಅಪಘಾತ: ಶೇನ್ ವಾರ್ನೆ ಗಾಯ

ಪಿಟಿಐ
Published 29 ನವೆಂಬರ್ 2021, 18:40 IST
Last Updated 29 ನವೆಂಬರ್ 2021, 18:40 IST
ಶೇನ್ ವಾರ್ನೆ –ಎಎಫ್‌ಪಿ ಚಿತ್ರ
ಶೇನ್ ವಾರ್ನೆ –ಎಎಫ್‌ಪಿ ಚಿತ್ರ   

ಮೆಲ್ಬರ್ನ್‌: ಆಸ್ಟ್ರೇಲಿಯಾದ ಸ್ಪಿನ್ ಮಾಂತ್ರಿಕ ಶೇನ್ ವಾರ್ನೆ ಅವರು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದು ಮೂಳೆಮುರಿತಕ್ಕೆ ಒಳಗಾಗಿದ್ದಾರೆ. ಈ ಘಟನೆಯಿಂದ ಜರ್ಜರಿತರಾಗಿರುವುದಾಗಿ ಅವರು ತಿಳಿಸಿದ್ದಾರೆ.

52 ವರ್ಷದ ಶೇನ್ ವಾರ್ನೆ ಅವರು ಮಗ ಜಾಕ್ಸನ್‌ನಲ್ಲಿ ಕೂರಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ಬಿದ್ದಿದ್ದಾರೆ. ಅವರಿಗೆ ಗಂಭೀರ ಗಾಯಗಳಾಗಲಿಲ್ಲ ಎಂದು ಆಸ್ಟ್ರೇಲಿಯಾದ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಸೋಮವಾರ ಬೆಳಿಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಗಾಯಗಳಾಗಿದ್ದು ತುಂಬಾ ನೊಂದಿದ್ದೇನೆ’ ಎಂದು ಹೇಳಿದ್ದಾರೆ.

ಡಿಸೆಂಬರ್ ಎಂಟರಂದು ಗಾಬಾದಲ್ಲಿ ಆರಂಭವಾಗಲಿರುವ ಆ್ಯಷಸ್ ಸರಣಿಯ ಮೊದಲ ಪಂದ್ಯದಲ್ಲಿ ವೀಕ್ಷಕ ವಿವರಣೆಕಾರನಾಗಿ ಶೇನ್ ವಾರ್ನೆ ಪಾಲ್ಗೊಳ್ಳಬೇಕಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.