ADVERTISEMENT

ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಿಂದಲೂ ಹೊರಬಿದ್ದ ವಾಷಿಂಗ್ಟನ್‌ ಸುಂದರ್

ಪಿಟಿಐ
Published 15 ಜನವರಿ 2026, 1:12 IST
Last Updated 15 ಜನವರಿ 2026, 1:12 IST
<div class="paragraphs"><p>ವಾಷಿಂಗ್ಟನ್ ಸುಂದರ್</p></div>

ವಾಷಿಂಗ್ಟನ್ ಸುಂದರ್

   

(ಚಿತ್ರ ಕೃಪೆ: ಬಿಸಿಸಿಐ)

ನವದೆಹಲಿ: ಭಾರತದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರು ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಿಂದಲೂ ಹೊರಬಿದ್ದಿದ್ದಾರೆ.

ADVERTISEMENT

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ವಾಷಿಂಗ್ಟನ್ ಎಡ ಪಕ್ಕೆಲುಬು ನೋವು ಅನುಭವಿಸಿದ್ದರು. ನಂತರ, ಅವರನ್ನು ಏಕದಿನ ಸರಣಿಯಿಂದ ಹೊರಗಿಡಲಾಯಿತು. ಟಿ20 ಸರಣಿಯು ಇದೇ 21ರಂದು ನಾಗ್ಪುರದಲ್ಲಿ ಆರಂಭವಾಗಲಿದೆ.

ತೊಡೆಸಂದು ಗಾಯದಿಂದ ಬಳಲುತ್ತಿರುವ ತಿಲಕ್ ವರ್ಮಾ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿರುವುದರಿಂದ ಅವರೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು ಟಿ20 ಪಂದ್ಯಗಳಿಂದ ಹೊರಗುಳಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.