
ಭಾರತ ತಂಡ
ಚಿತ್ರ ಎಕ್ಸ್
ತವರಿನಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1–0 ಅಂತರ ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಭಾರತದ ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಪಕ್ಕೆ ಎಲುಬಿಗೆ ಗಾಯಕ್ಕೆ ಒಳಗಾಗಿ, ಸರಣಿಯ ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.
ವಡೋದರಾದಲ್ಲಿ ನಡೆದ ಮೊದಲ ಪಂದ್ಯದಲಿ 5 ಓವರ್ ಬೌಲಿಂಗ್ ಮಾಡಿದ ಸುಂದರ್ 27 ರನ್‌ಗಳನ್ನು ನೀಡಿದ್ದರು. ಈ ವೇಳೆ ಪಂದ್ಯದ ನಡುವೆಯೇ ಮೈದಾನದಿಂದ ಹೊರನಡೆದರು. ನಂತರ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಮೈದಾನಕ್ಕೆ ಬಂದರು.
’ಆಲ್‌ರೌಂಡರ್ ವಾಷಿಂಗ್ಟನ್ ಅವರು ಪಕ್ಕೆಲುಬಿನ ಗಾಯಕ್ಕೆ ಒಳಗಾಗಿದ್ದು, ಅವರನ್ನು ಪಂದ್ಯದಿಂದ ಹೊರಗಿಡಲಾಗಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ 3ನೇ ಭಾರತೀಯ:
ಕಳೆದ ವಾರ ಭಾರತ ತಂಡದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್ ಗಾಯಗೊಂಡು ಸರಣಿಯಿಂದ ಹೊರಗುಳಿದಿದ್ದರು. ತಿಲಕ್ ವರ್ಮಾ ಕೂಡ ಗಾಯದಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಮೂರು ಟಿ20 ಪಂದ್ಯಗಳಿಂದ ಹೊರಗುಳಿಯಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.