ADVERTISEMENT

ಹೆಲಿಕಾಪ್ಟರ್ ಶಾಟ್ ಆಡಿದ ಹಾರ್ದಿಕ್ ಪಾಂಡ್ಯ!

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2019, 20:06 IST
Last Updated 15 ಮಾರ್ಚ್ 2019, 20:06 IST
ಹಾರ್ದಿಕ್ ಪಾಂಡ್ಯ
ಹಾರ್ದಿಕ್ ಪಾಂಡ್ಯ   

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಮುಂಬೈ ಇಂಡಿಯನ್ಸ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಧೋನಿಯ ಟ್ರೇಡ್ ಮಾರ್ಕ್ ಆಗಿರುವ ಹೆಲಿಕಾಪ್ಟರ್ ಶಾಟ್ ಬಾರಿಸಿ ಅಚ್ಚರಿಊಡಿಸಿದ್ದಾರೆ.

ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿ ಯೋವನ್ನು ಅಪ್‌ಲೋಡ್ ಮಾಡಿರುವ ಹಾರ್ದಿಕ್, 'ಈ ಹೊಡೆತದ ಹಿಂದಿರುವ ನನ್ನ ಸ್ಫೂರ್ತಿ ಯಾರು ಅನ್ನೋದನ್ನು ಗೆಸ್ ಮಾಡಿ' ಎಂಬ ಸಾಲನ್ನೂ ಸೇರಿಸಿಕೊಂಡಿದ್ದಾರೆ.

ಮುಂಬೈನ ರಿಲಯನ್ಸ್ ಕಾರ್ಪೊರೇಟ್ ಪಾರ್ಕ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಈ ಅಭ್ಯಾಸ ಶಿಬಿರ ನಡೆಯುತ್ತಿದೆ.

ADVERTISEMENT

ಗಾಯದ ಕಾರಣದಿಂದಾಗಿ ಹಾರ್ದಿಕ್, ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಈಗ ಚೇತರಿಸಿಕೊಂಡಿದ್ದು, ಐಪಿಎಲ್ ಟೂರ್ನಿಗಾಗಿ ಅಭ್ಯಾಸ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.