ADVERTISEMENT

ರೈತರ ಹೋರಾಟದ ಬಗ್ಗೆ ತಂಡದ ಸಭೆಯಲ್ಲಿ ಚರ್ಚೆಯಾಗಿದೆ: ವಿರಾಟ್‌ ಕೊಹ್ಲಿ

ಪಿಟಿಐ
Published 4 ಫೆಬ್ರುವರಿ 2021, 11:57 IST
Last Updated 4 ಫೆಬ್ರುವರಿ 2021, 11:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಚೆನ್ನೈ: 'ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವು ತಂಡದ ಸಭೆಯಲ್ಲಿ ಚರ್ಚೆಗೆ ಬಂದಿದ್ದು, ಅಲ್ಲಿ ಎಲ್ಲರೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ,' ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ವಿರಾಟ್‌ ಕೊಹ್ಲಿ ಮಾಧ್ಯಮಗಳೊಂದಿಗೆ ಆನ್‌ಲೈನ್‌ನಲ್ಲಿ ಮಾತನಾಡಿದರು. ಆದರೆ, ಟೀಂ ಇಂಡಿಯಾ ಆಟಗಾರರ ನಡುವೆ ನಡೆದಿರುವ 'ಸಂಕ್ಷಿಪ್ತ ಚರ್ಚೆ' ಸಂಪೂರ್ಣ ವಿವರವನ್ನು ಅವರು ಬಹಿರಂಗಪಡಿಸಲಿಲ್ಲ.

ರಾಷ್ಟ್ರ ರಾಜಧಾನಿ ಸಮೀಪ ಎರಡು ತಿಂಗಳಿನಿಂದ ನಡೆಯುತ್ತಿರುವ ರೈತ ಚಳವಳಿ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, 'ಅದರ ಬಗ್ಗೆ ನಾವು ತಂಡದ ಸಭೆಯಲ್ಲಿ ಸಂಕ್ಷಿಪ್ತವಾಗಿ ಚರ್ಚಿಸಿದ್ದೇವೆ. ಎಲ್ಲರೂ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ' ಎಂದು ಹೇಳಿದರು.

ADVERTISEMENT

ರೈತ ಹೋರಾಟದ ಬಗ್ಗೆ ಅಮೆರಿಕದ ಪಾಪ್‌ ಗಾಯಕಿ ರಿಹಾನ್ನಾ, ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್‌ ಸೇರಿದಂತೆ ಜಗತ್ತಿನ ಹಲವರು ಟ್ವಿಟರ್‌ನಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಲೇ ಭಾರತದ ಕ್ರಿಕೆಟ್‌ ದಂಥ ಕತೆ ಸಚಿನ್‌ ತೆಂಡೂಲ್ಕರ್‌ ಅದರ ವಿರುದ್ಧ ಧ್ವನಿ ಎತ್ತಿದ್ದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ್ದ ವಿರಾಟ್‌ ಕೊಹ್ಲಿ, ದೇಶಕ್ಕಾಗಿ ಒಗ್ಗಟ್ಟಾಗಿ ನಿಲ್ಲುವುದಾಗಿ ಹೆಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.