
ಮುಂಬೈ: ಟಿ20 ವಿಶ್ವಕಪ್‌ನ ಸೂಪರ್–8 ಪಂದ್ಯದಲ್ಲಿ ಜಿಂಬಾಬ್ವೆ ಬೌಲರ್‌ಗಳ ಬೆವರಿಳಿಸಿದ ವೆಸ್ಟ್ ಇಂಡೀಸ್ ತಂಡವು 20 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿದೆ. ಇದು ಟಿ–20 ವಿಶ್ವಕಪ್‌ನಲ್ಲಿ ಎರಡನೇ ಅತಿದೊಡ್ಡ ಮೊತ್ತವಾಗಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡವು ಬ್ರಾಂಡನ್ ಕಿಂಗ್ (9 ರನ್) ಹಾಗೂ ನಾಯಕ ಶಾಯ್ ಹೋಪ್ (14 ರನ್) ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿತು.
ಅನುಭವಿ ಆಟಗಾರ ಶಿಮ್ರಾನ್ ಹೆಟ್ಮೆಯರ್ (85 ರನ್: 34 ಎಸೆತ) ಹಾಗೂ ರೋಮನ್ ಪೊವೆಲ್ (59 ರನ್: 35ಎಸೆತ) ಸ್ಪೋಟಕ ಅರ್ಧಶತಕ ಸಿಡಿಸಿದರು.
ಡೆತ್ ಓವರ್‌ನಲ್ಲಿ ಶೆರ್ಫೇನ್ ರುದರ್‌ಫೋರ್ಡ್, 13 ಎಸೆತಗಳಲ್ಲಿ 31 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 250 ರನ್ ಗಡಿ ದಾಟಿಸಿದರು.
ಲೀಗ್ ಹಂತದಲ್ಲಿ ಅಜೇಯವಾಗಿ ಉಳಿದಿದ್ದ ಜಿಂಬಾಬ್ವೆ ತಂಡವು ಪಂದ್ಯ ಗೆಲ್ಲಲು 255 ರನ್‌ಗಳ ಬೃಹತ್ ಗುರಿಯನ್ನು ತಲುಪಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.