ಜೇಸನ್ ಹೋಲ್ಡರ್
ಚಿತ್ರ: ಎಕ್ಸ್
ಅಹಮದಾಬಾದ್: ಇಲ್ಲಿ ಆರಂಭವಾಗಿರುವ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್‌ನ ಸೂಪರ್–8ರ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ ತಂಡವು ನಿಗದಿತ 20 ಓವರ್‌ನಲ್ಲಿ 176 ರನ್ ಕಲೆಹಾಕಿದೆ. ಆ ಮೂಲಕ ದಕ್ಷಿಣ ಆಫ್ರಿಕಾ ಗೆಲುವಿಗೆ ಬೃಹತ್ ಗುರಿ ನೀಡಿದೆ.
83ಕ್ಕೆ 7
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭದಲ್ಲಿ ಯಾವೊಬ್ಬ ಬ್ಯಾಟರ್ ಕೂಡ ಕ್ರೀಸ್ ಕಚ್ಚಿ ಆಡಲಿಲ್ಲ. ಅಗ್ರಕ್ರಮಾಂಕದ ಬ್ಯಾಟರ್‌ಗಳ ನೀರಸ ಪ್ರದರ್ಶನದಿಂದಾಗಿ ವಿಂಡೀಸ್ ತಂಡ ಒಂದು ಹಂತದಲ್ಲಿ 7 ವಿಕೆಟ್ ಕಳೆದುಕೊಂಡು 84 ರನ್ ಕಲೆಹಾಕಿತ್ತು. ಆದರೆ, ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಇಳಿದ ರೊಮಾರಿಯೊ ಶೆಫರ್ಡ್ ಹಾಗೂ ಜೇಸನ್ ಹೋಲ್ಡರ್ ಜೋಡಿಯು ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಕಾಡಿದರು.
8ನೇ ವಿಕೆಟ್‌ಗೆ ಜೊತೆಯಾದ ಈ ಜೋಡಿ 90 ರನ್‌ಗಳ ಜೊತೆಯಾಟ ಆಡಿದರು. ಈ ವೇಳೆ, ಜೇಸನ್ ಹೋಲ್ಡರ್ (49 ರನ್, 31ಎ, 4X4, 6X3) ಹಾಗೂ ರೊಮಾರಿಯೊ ಶೆಫರ್ಡ್ (ಅಜೇಯ 52ರನ್, 37ಎ, 3X4, 4X4) ಕಲೆಹಾಕುವ ಮೂಲಕ ದಕ್ಷಿಣ ಆಫ್ರಿಕಾ ಗೆಲುವಿಗೆ 177 ರನ್ ಗುರಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.