ADVERTISEMENT

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಜಂಟಿ ಎರಡನೇ ಸ್ಥಾನದಲ್ಲಿ ಕೇನ್‌, ಕೊಹ್ಲಿ

ಐಸಿಸಿ ಟೆಸ್ಟ್ ರ‍್ಯಾಂಕಿಂಗ್: ಆಲ್‌ರೌಂಡರ್‌ಗಳ ವಿಭಾಗದಲ್ಲಿ ಜಡೇಜಗೆ ಮೂರನೇ ಸ್ಥಾನ

ಪಿಟಿಐ
Published 7 ಡಿಸೆಂಬರ್ 2020, 13:29 IST
Last Updated 7 ಡಿಸೆಂಬರ್ 2020, 13:29 IST
ವಿರಾಟ್‌ ಕೊಹ್ಲಿ–ರಾಯಿಟರ್ಸ್ ಚಿತ್ರ
ವಿರಾಟ್‌ ಕೊಹ್ಲಿ–ರಾಯಿಟರ್ಸ್ ಚಿತ್ರ   

ದುಬೈ: ನ್ಯೂಜಿಲೆಂಡ್ ಕ್ರಿಕೆಟ್‌ ತಂಡದ ನಾಯಕ ಕೇನ್‌ ವಿಲಿಯಮ್ಸನ್‌ ಅವರು ಐಸಿಸಿ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೆ ಏರಿದ್ದಾರೆ. ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ಕೇನ್‌ ಜಂಟಿಯಾಗಿ ಈ ಸ್ಥಾನದಲ್ಲಿದ್ದಾರೆ.

ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್‌ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ. ಚೇತೇಶ್ವರ್ ಪೂಜಾರ ಏಳನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ ವಿಭಾಗದಲ್ಲಿ ವೆಸ್ಟ್ ಇಂಡೀಸ್‌ ತಂಡದ ನಾಯಕ ಜೇಸನ್‌ ಹೋಲ್ಡರ್‌ ಅಗ್ರಸ್ಥಾನ ಕಳೆದುಕೊಂಡಿದ್ದು, ಆ ಸ್ಥಾನವು ಇಂಗ್ಲೆಂಡ್‌ ತಂಡದ ಬೆನ್‌ ಸ್ಟೋಕ್ಸ್ ಅವರ ಪಾಲಾಗಿದೆ. ಇತ್ತೀಚೆಗೆ ವೆಸ್ಟ್ ಇಂಡೀಸ್ ತಂಡವು ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎದುರು ಇನಿಂಗ್ಸ್ ಮತ್ತು 134 ರನ್‌ಗಳಿಂದ ಸೋತಿತ್ತು. ಹೋಲ್ಡರ್ ಉತ್ತಮ ಸಾಮರ್ಥ್ಯ ತೋರಲು ವಿಫಲರಾಗಿದ್ದರು. ಈ ವಿಭಾಗದಲ್ಲಿ ಭಾರತದ ರವೀಂದ್ರ ಜಡೇಜ ಮೂರನೇ ಹಾಗೂ ರವಿಚಂದ್ರನ್ ಅಶ್ವಿನ್‌ ಆರನೇ ಸ್ಥಾನದಲ್ಲಿದ್ದಾರೆ.

ADVERTISEMENT

ಬೌಲರ್‌ಗಳ ವಿಭಾಗದಲ್ಲಿ ಭಾರತದ ಜಸ್‌ಪ್ರೀತ್ ಬೂಮ್ರಾ 9ನೇ ಸ್ಥಾನದಲ್ಲಿದ್ದಾರೆ. ಅಶ್ವಿನ್‌ 11ನೇ ಹಾಗೂ ಮೊಹಮ್ಮದ್‌ ಶಮಿ 13ನೇ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.