ADVERTISEMENT

ಐಪಿಎಲ್ ವೇಳೆ ಗಾಯ: ವಿಶ್ವಕಪ್‌ ಟೂರ್ನಿಗೆ ಕೇನ್ ವಿಲಿಯಮ್ಸನ್ ಅಲಭ್ಯ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 13:47 IST
Last Updated 6 ಏಪ್ರಿಲ್ 2023, 13:47 IST
ಗಾಯಾಳು ಕೇನ್‌ ವಿಲಿಯಮ್ಸನ್‌ ಅವರನ್ನು ಕರೆದುಕೊಂಡು ಹೋಗುತ್ತಿರುವುದು (ಪಿಟಿಐ ಚಿತ್ರ)
ಗಾಯಾಳು ಕೇನ್‌ ವಿಲಿಯಮ್ಸನ್‌ ಅವರನ್ನು ಕರೆದುಕೊಂಡು ಹೋಗುತ್ತಿರುವುದು (ಪಿಟಿಐ ಚಿತ್ರ)   

ವೆಲಿಂಗ್ಟನ್: ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರು ಗಾಯಗೊಂಡಿರುವ ಕಾರಣ ಇದೇ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್‌ ಟೂರ್ನಿಗೆ ಅಲಭ್ಯರಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅವರು ಗುಜರಾತ್ ಟೈಟನ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಅಹಮದಾಬಾದಿನಲ್ಲಿ ನಡೆದಿದ್ದ ಟೂರ್ನಿಯ ಮೊದಲ ಪಂದ್ಯದಲ್ಲಿ ಅವರು ಫೀಲ್ಡಿಂಗ್ ಮಾಡುವಾಗ ಬಿದ್ದು ಕಾಲಿಗೆ ಪೆಟ್ಟಾಗಿತ್ತು. ಅವರ ಬಲಗಾಲಿನ ಅಸ್ಥಿಮಜ್ಜೆಗೆ (ಎಸಿಎಲ್) ಧಕ್ಕೆಯಾಗಿದೆ.

ಮುಂದಿನ ಮೂರು ವಾರಗಳಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿದೆ. ಆದ್ದರಿಂದ ಅವರು ತಮ್ಮ ತವರಿಗೆ ಮರಳಿದ್ದಾರೆ. ದೀರ್ಘ ಕಾಲದ ವಿಶ್ರಾಂತಿಯ ಅಗತ್ಯವಿರುವುದರಿಂದ ವಿಶ್ವಕಪ್ ಟೂರ್ನಿಯಲ್ಲಿ ಆಡುವುದು ಸಾಧ್ಯವಾಗುವುದಿಲ್ಲ ಎಂದು ಕ್ರಿಕೆಟ್ ನ್ಯೂಜಿಲೆಂಡ್ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.