ಕೊಲಂಬೊ: ಮಹಿಳಾ ವಿಶ್ವಕಪ್‌ನ 12ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡವು 50 ಓವರ್‌ಗಳ ಅಂತ್ಯಕ್ಕೆ 9 ವಿಕೆಟ್ ನಷ್ಟಕ್ಕೆ 253 ರನ್ ಗಳಿಸಿದೆ.
ಶ್ರೀಲಂಕಾ ಗೆಲುವಿಗೆ 254 ರನ್‌ಗಳ ಗುರಿ ನೀಡಿದೆ.
ಇಂಗ್ಲೆಂಡ್ ಪರ ನಾಯಕಿ ನ್ಯಾಟ್ ಸಿವರ್-ಬ್ರಂಟ್ ಅವರು ಅಮೋಘ ಶತಕ ಸಿಡಿಸಿದರು. 117 ರನ್(117 ಎಸೆತ)ಗಳಿಸಿ ಮಿಂಚಿದರು. ಇದರಲ್ಲಿ 9 ಬೌಂಡರಿ ಹಾಗೂ 2 ಸಿಕ್ಸರ್‌ಗಳಿದ್ದವು.
ಶ್ರೀಲಂಕಾ ಪರ ಇನೋಕಾ ರಣವೀರ 3 ವಿಕೆಟ್, ಸುಂಗಧಿಕಾ ಕುಮಾರಿ ಹಾಗೂ ಉದೇಶಿಕಾ ಪ್ರಬೋಧನಿ ಅವರು ತಲಾ 2 ವಿಕೆಟ್ ಪಡೆದು ಮಿಂಚಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.