ADVERTISEMENT

ಸೆಮಿಯಲ್ಲಿ ಭಾರತ–ಇಂಗ್ಲೆಂಡ್‌ ಹಣಾಹಣಿ

ಮಹಿಳಾ ವಿಶ್ವ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿ

ಪಿಟಿಐ
Published 19 ನವೆಂಬರ್ 2018, 19:51 IST
Last Updated 19 ನವೆಂಬರ್ 2018, 19:51 IST

ಗ್ರಾಸ್‌ ಐಲೆಟ್‌, ಸೇಂಟ್‌ ಲೂಸಿಯಾ: ಭಾರತ ಮಹಿಳಾ ತಂಡ ಈ ಬಾರಿಯ ವಿಶ್ವ ಟ್ವೆಂಟಿ–20 ಕ್ರಿಕೆಟ್‌ ಟೂರ್ನಿಯ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಪೈಪೋಟಿ ನಡೆಸಲಿದೆ.

ನಾರ್ತ್‌ಸೌಂಡ್‌ನಲ್ಲಿ ಇದೇ ಶುಕ್ರವಾರ ಪಂದ್ಯ ಆಯೋಜನೆಯಾಗಿದೆ.

ಇಂಗ್ಲೆಂಡ್‌ ತಂಡ ಸೋಮವಾರ ನಡೆದ ‘ಎ’ ಗುಂಪಿನ ಕೊನೆಯ ಲೀಗ್‌ ಪಂದ್ಯದಲ್ಲಿ 4 ವಿಕೆಟ್‌ಗಳಿಂದ ವೆಸ್ಟ್‌ ಇಂಡೀಸ್‌ ಎದುರು ಸೋತಿತು. ಈ ಮೂಲಕ ಪಾಯಿಂಟ್ಸ್‌ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿಯಿತು. ಹರ್ಮನ್‌ಪ್ರೀತ್‌ ಕೌರ್‌ ಸಾರಥ್ಯದ ಭಾರತ ತಂಡ ‘ಬಿ’ ಗುಂಪಿನ ಪಾಯಿಂಟ್ಸ್‌ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿತ್ತು.

ADVERTISEMENT

ಹೋದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡ ಇಂಗ್ಲೆಂಡ್‌ ಎದುರು ಪರಾಭವಗೊಂಡಿತ್ತು. ಹಿಂದಿನ ಸೋಲಿಗೆ ಮುಯ್ಯಿ ತೀರಿಸಿಕೊಳ್ಳಲು ಭಾರತಕ್ಕೆ ಈಗ ಉತ್ತಮ ಅವಕಾಶ ಸಿಕ್ಕಿದೆ.

ನಾಲ್ಕರ ಘಟ್ಟದ ಇನ್ನೊಂದು ಹೋರಾಟದಲ್ಲಿ ಹಾಲಿ ಚಾಂಪಿಯನ್‌ ವೆಸ್ಟ್‌ ಇಂಡೀಸ್‌ ಮತ್ತು ‘ಬಿ’ ಗುಂಪಿನಲ್ಲಿ ಎರಡನೇ ಸ್ಥಾನ ಗಳಿಸಿದ್ದ ಆಸ್ಟ್ರೇಲಿಯಾ ತಂಡಗಳು ಸೆಣಸಲಿವೆ.

ಸೋಮವಾರದ ಲೀಗ್‌ ಹಣಾಹಣಿಯಲ್ಲಿ ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌, 20 ಓವರ್‌ಗಳಲ್ಲಿ 8 ವಿಕೆಟ್‌ಗೆ 115ರನ್‌ ಗಳಿಸಿತು. 116ರನ್‌ಗಳ ಸುಲಭ ಗುರಿಯನ್ನು ವಿಂಡೀಸ್‌ ವನಿತೆಯರು 19.3 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು ಮುಟ್ಟಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.