
ಮುಂಬೈ: ಮಹಿಳಾ ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಶುಭಾಶಯಗಳನ್ನು ತಿಳಿಸಿರುವ ಮಹಾರಾಷ್ಟ್ರ ಸರ್ಕಾರ, ರಾಜ್ಯದ ಆಟಗಾರ್ತಿಯರಿಗೆ ನಗದು ಬಹುಮಾನ ನೀಡುವುದಾಗಿ ಮಂಗಳವಾರ ತಿಳಿಸಿದೆ.
ಮೊದಲ ಬಾರಿ ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು. ತಂಡದಲ್ಲಿದ್ದ ಮಹಾರಾಷ್ಟ್ರ ಮೂಲದ ಆಟಗಾರ್ತಿಯರಾದ ಸ್ಮೃತಿ ಮಂದಾನ, ಜೆಮಿಮಾ ರಾಡ್ರಿಗಸ್ ಹಾಗೂ ರಾಧಾ ಯಾದವ್ ಅವರಿಗೆ ನಗದು ಬಹುಮಾನ ನೀಡಿ, ಗೌರವಿಸಲಿದ್ದೇವೆ ಎಂದು ಮುಖ್ಯಮಂತ್ರಿ ಕಚೇರಿಯು ಹೇಳಿದೆ.
ಆದರೆ, ಬಹುಮಾನದ ಮೊತ್ತವನ್ನು ಮುಖ್ಯಮಂತ್ರಿ ಕಚೇರಿಯು ತಿಳಿಸಿಲ್ಲ.
ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ಹಾಗೂ ಅಜಿತ್ ಪವಾರ್ ಅವರು ಕೂಡ ಭಾಗವಹಿಸಿದ್ದರು.
ಭಾನುವಾರ ರಾತ್ರಿ ನವಿ ಮುಂಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನು 52 ರನ್‌ಗಳ ಅಂತರದಲ್ಲಿ ಸೋಲಿಸುವ ಮೂಲಕ ವಿಶ್ವಕಪ್ ಗೆದ್ದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.