ADVERTISEMENT

ಏಕದಿನ ರ‍್ಯಾಂಕಿಂಗ್‌: ಮಿಥಾಲಿ, ಮಂದಾನ ಸ್ಥಾನ ಸ್ಥಿರ

ಪಿಟಿಐ
Published 7 ಜೂನ್ 2022, 12:52 IST
Last Updated 7 ಜೂನ್ 2022, 12:52 IST
ಮಿಥಾಲಿ ರಾಜ್‌– ಪಿಟಿಐ ಚಿತ್ರ
ಮಿಥಾಲಿ ರಾಜ್‌– ಪಿಟಿಐ ಚಿತ್ರ   

ದುಬೈ: ಭಾರತದ ಮಿಥಾಲಿ ರಾಜ್ ಮತ್ತು ಸ್ಮೃತಿ ಮಂದಾನ ಅವರು ಐಸಿಸಿ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಏಳನೇ ಮತ್ತು ಒಂಬತ್ತನೇ ಸ್ಥಾನ ಕಾಪಾಡಿಕೊಂಡಿದ್ದಾರೆ.

ಮಂಗಳವಾರ ಪ್ರಕಟವಾದ ರ‍್ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾದ ಅಲಿಸಾ ಹೀಲಿ ಅಗ್ರಸ್ಥಾನದಲ್ಲಿದ್ದು, ಇಂಗ್ಲೆಂಡ್‌ನ ನತಾಲಿ ಸೀವರ್‌ ಎರಡನೇ ಸ್ಥಾನದಲ್ಲಿದ್ದಾರೆ.

ಶ್ರೀಲಂಕಾ ಎದುರಿನ ಸರಣಿಯಲ್ಲಿ ಉತ್ತಮ ಸಾಮರ್ಥ್ಯ ತೋರಿದ್ದ ಪಾಕಿಸ್ತಾನದ ಆರಂಭಿಕ ಬ್ಯಾಟರ್ ಸಿದ್ರಾ ಅಮಿನ್‌ 19 ಸ್ಥಾನಗಳ ಬಡ್ತಿ ಪಡೆದು 35ನೇ ಸ್ಥಾನಕ್ಕೇರಿದ್ದಾರೆ.

ADVERTISEMENT

ಬೌಲಿಂಗ್ ವಿಭಾಗದಲ್ಲಿ ಭಾರತದ ವೇಗಿ ಜೂಲನ್ ಗೋಸ್ವಾಮಿ ಐದನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಈ ವಿಭಾಗದಲ್ಲಿ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್‌ ಮೊದಲ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.