ಹರ್ಮನ್‌ಪ್ರೀತ್ ಕೌರ್
ಕೊಲಂಬೊ: ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳೆಯರ ಕ್ರಿಕೆಟ್ ತಂಡವು ತ್ರಿಕೋನ ಸರಣಿಯ ತನ್ನ ಎರಡನೇ ಪಂದ್ಯದಲ್ಲಿ ಮಂಗಳವಾರ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.
ಭಾನುವಾರ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ತಂಡವನ್ನು ಒಂಬತ್ತು ವಿಕೆಟ್‌ಗಳಿಂದ ಮಣಿಸಿರುವ ಭಾರತದ ವನಿತೆಯರು ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದಾರೆ.
ಭಾರತ ತಂಡವು ಮೂರು ವಿಭಾಗಗಳಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿತ್ತು. ಸ್ಪಿನ್ನರ್‌ಗಳಾದ ಸ್ನೇಹಾ ರಾಣಾ, ದೀಪ್ತಿ ಶರ್ಮಾ ಮತ್ತು ಶ್ರೀಚಾರಣಿ ಅವರನ್ನು ಲಂಕಾ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಅಗ್ರ ಬ್ಯಾಟರ್‌ಗಳಾದ ಪ್ರತೀಕಾ ರಾವಲ್, ಸ್ಮೃತಿ ಮಂದಾನ ಮತ್ತು ಹರ್ಲೀನ್ ಡಿಯೋಲ್ ಅವರು ಸೊಗಸಾಗಿ ಆಡಿ ತಂಡವನ್ನು ಗೆಲುವಿನ ದಡ ಸೇರಿಸಿದ್ದರು. ಫೀಲ್ಡಿಂಗ್ ಕೂಡ ಅತ್ಯಂತ ಚುರುಕಾಗಿತ್ತು.
ಭಾರತ ತಂಡವು 2022ರಿಂದ ಈ ಮಾದರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತಿಲ್ಲ. ಈ ಬಾರಿಯೂ ಕೌರ್ ಪಡೆ ಜಯದ ಓಟ ಮುಂದುವರಿಸುವ ಛಲದಲ್ಲಿದೆ.
ಪಂದ್ಯ ಆರಂಭ: ಬೆಳಿಗ್ಗೆ 10
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.