ಪೊಚೆಫ್‌ಸ್ಟ್ರೂಮ್, ದಕ್ಷಿಣ ಆಫ್ರಿಕಾ: ಅಮೋಘ ಲಯದಲ್ಲಿರುವ ಭಾರತ ತಂಡವು 19 ವರ್ಷದೊಳಗಿನ ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ ಸಿಕ್ಸ್ ಪಂದ್ಯದಲ್ಲಿ ಶನಿವಾರ ಆಸ್ಟ್ರೇಲಿಯಾ ಸವಾಲು ಎದುರಿಸಲಿದೆ.
ಡಿ ಗುಂಪಿನಲ್ಲಿ ಸತತ ಮೂರು ಪಂದ್ಯಗಳನ್ನು ಗೆದ್ದಿದ್ದ ಶಫಾಲಿ ವರ್ಮಾ ನಾಯಕತ್ವದ ಭಾರತ ತಂಡವು ಅಗ್ರಸ್ಥಾನದೊಂದಿಗೆ ಸೂಪರ್ ಸಿಕ್ಸ್ ಹಂತ ತಲುಪಿದೆ. ಶಫಾಲಿ ಅವರೊಂದಿಗೆ ಶ್ವೇತಾ ಶೆರಾವತ್ ತಂಡದ ಬ್ಯಾಟಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಬೌಲಿಂಗ್‌ನಲ್ಲಿ ಮನ್ನತ್ ಕಶ್ಯಪ್, ಅರ್ಚನಾ ದೇವಿ ಪರಿಣಾಮಕಾರಿ ಎನಿಸಿದ್ದಾರೆ.
ಉತ್ತಮ ಲಯದೊಂದಿಗೆ ಪಂದ್ಯವನ್ನು ಗೆಲ್ಲುವ ವಿಶ್ವಾಸದಲ್ಲಿ ಭಾರತ ತಂಡವಿದೆ.
ಆಸ್ಟ್ರೇಲಿಯಾ ತಂಡವು ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದಿತ್ತು.
ಪಂದ್ಯ ಆರಂಭ: ಸಂಜೆ 5.15
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.