ADVERTISEMENT

ಭಾರತ Vs ಇಂಗ್ಲೆಂಡ್‌: ಟಾಸ್‌ ಗೆದ್ದ ಇಂಗ್ಲೆಂಡ್‌, ಮಿಥಾಲಿ ಪಡೆ ಬ್ಯಾಟಿಂಗ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2022, 2:01 IST
Last Updated 16 ಮಾರ್ಚ್ 2022, 2:01 IST
ದೀಪ್ತಿ ಶರ್ಮಾ ವಿಕೆಟ್‌ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್‌ ವನಿತೆಯರು (ಚಿತ್ರ: ಐಸಿಸಿ)
ದೀಪ್ತಿ ಶರ್ಮಾ ವಿಕೆಟ್‌ ಪಡೆದ ಸಂಭ್ರಮದಲ್ಲಿ ಇಂಗ್ಲೆಂಡ್‌ ವನಿತೆಯರು (ಚಿತ್ರ: ಐಸಿಸಿ)   

ಮೌಂಟ್ ಮಾಂಗನುಯಿ: ಮಹಿಳೆಯರ ವಿಶ್ವಕಪ್‌ ಟೂರ್ನಿಯ ಭಾರತದ ವಿರುದ್ಧ ಮಹತ್ವದ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಫೀಲ್ಡಿಂಗ್‌ ಆಯ್ಕೆ ಮಾಡಿದೆ. ಮಿಥಾಲಿ‌ ರಾಜ್‌ ಬಳಗವು ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡವನ್ನು ಮಣಿಸುವ ಹುರುಪಿನಲ್ಲಿದೆ.

ಹಾಲಿ ಚಾಂಪಿಯನ್ ಇಂಗ್ಲೆಂಡ್ ಆಡಿರುವ ಎಲ್ಲ ಮೂರು ಪಂದ್ಯಗಳನ್ನು ಸೋತಿದೆ. ಪ್ಲೇ ಆಫ್ ಹಂತಕ್ಕೇರುವ ಆಸೆಯನ್ನು ಜೀವಂತವಾಗಿರಿಸಿಕೊಳ್ಳಬೇಕಾದರೆ ಹೀದರ್ ನೈಟ್ ಬಳಗ ಉಳಿದ ಪಂದ್ಯಗಳಲ್ಲಿ ಉತ್ತಮ ಸಾಮರ್ಥ್ಯ ತೋರಬೇಕು. ಹೀಗಾಗಿ ಭಾರತದ ವಿರುದ್ಧ ಪ್ರಬಲ ಪೈಪೋಟಿ ನಡೆಸುವ ಸಾಧ್ಯತೆ ಇದೆ.

ಆರಂಭದಿಂದಲೇ ನಿರಾಸೆ ಕಂಡಿರುವ ಇಂಗ್ಲೆಂಡ್ ಪಾಯಿಂಟ್ ಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ಕುಸಿದಿದ್ದು ಸಿಡಿದೇಳುವ ತವಕದಲ್ಲಿದೆ. ಬುಧವಾರದ ಪಂದ್ಯದಲ್ಲಿ ಸೋತರೆ ತಂಡದ ಪ್ಲೇ ಆಫ್ ಹಂತಕ್ಕೇರುವ ಆಸೆ ಕಮರಿ ಹೋಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.