ಇಂದೋರ್: ಕೆಲವು ಕೆಟ್ಟ ಹೊಡೆತಗಳಿಂದಾಗಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತೆವು ಎಂದು ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹೇಳಿದ್ದಾರೆ.
ಭಾನುವಾರ ನಡೆದ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧದ ಬಹುಮುಖ್ಯ ಪಂದ್ಯದಲ್ಲಿ 289 ರನ್‌ಗಳ ಗುರಿ ಬೆನ್ನತ್ತಿದ್ದ ಭಾರತವು 4 ರನ್‌ಗಳ ಅಂತರದಲ್ಲಿ ಸೋತಿತ್ತು.
‘ಗುರಿ ಬೆನ್ನತ್ತುವ ವೇಳೆ ನಾನು ಔಟ್ ಆಗಿದ್ದು, ಬ್ಯಾಟಿಂಗ್ ಕುಸಿತಕ್ಕೆ ಕಾರಣವಾಯಿತು. ಇಂಗ್ಲೆಂಡ್ ವಿರುದ್ಧದ ಸೋಲಿನ ಹೊಣೆಯನ್ನು ನಾನು ತೆಗೆದುಕೊಳ್ಳುತ್ತೇನೆ’ ಎಂದು ಸ್ಮೃತಿ ಮಂದಾನ ಹೇಳಿದ್ದಾರೆ.
‘ನಮ್ಮ ಬ್ಯಾಟರ್‌ಗಳು ಕೆಲವು ಕೆಟ್ಟ ಹೊಡೆತಗಳಿಗೆ ಪ್ರಯತ್ನಿಸಿದ್ದರಿಂದ ವಿಕೆಟ್‌ಗಳ ಪತನವಾಯಿತು. ನಾವು ಇನ್ನೂ ಉತ್ತಮವಾಗಿ ಆಡಬಹುದಾಗಿತ್ತು’ ಎಂದಿದ್ದಾರೆ.
ಭಾರತದ ಪರ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ 88 ರನ್ ಗಳಿಸಿ ಗೆಲುವಿನ ಭರವಸೆ ಮೂಡಿಸಿದ್ದರು. ಆದರೆ, ಕೊನೆಯ ಓವರ್‌ಗಳಲ್ಲಿ ಇಂಗ್ಲೆಂಡ್ ಬೌಲರ್‌ಗಳು ಮೇಲುಗೈ ಸಾಧಿಸಿದರು.
ಇಂಗ್ಲೆಂಡ್ ವಿರುದ್ಧ ಸೋಲುವ ಮೂಲಕ ಭಾರತ ತಂಡವು ಟೂರ್ನಿಯಲ್ಲಿ ಸತತ ಮೂರನೇ ಪಂದ್ಯದಲ್ಲಿ ಸೋಲನುಭವಿಸಿದೆ. ಸೆಮಿಫೈನಲ್ ಪ್ರವೇಶಿಸಲು ಉಳಿದ ಎರಡು ಪಂದ್ಯಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.