ADVERTISEMENT

ಬೂಮ್ರಾ ಫಿಟ್: ದ್ರಾವಿಡ್ ನಿರೀಕ್ಷೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 6:26 IST
Last Updated 2 ಅಕ್ಟೋಬರ್ 2022, 6:26 IST
ರಾಹುಲ್ ದ್ರಾವಿಡ್
ರಾಹುಲ್ ದ್ರಾವಿಡ್   

ಗುವಾಹಟಿ (ಪಿಟಿಐ): ವೇಗಿ ಜಸ್‌ಪ್ರೀತ್ ಬೂಮ್ರಾ ಅವರು ಮುಂದಿನ ತಿಂಗಳು ಟಿ20 ವಿಶ್ವಕಪ್ ಟೂರ್ನಿಯ ವೇಳೆಗೆ ‘ಫಿಟ್‌’ ಆಗಬಹುದುಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭರವಸೆ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಸದ್ಯ ಅವರು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕೆಲವು ದಿನಗಳ ವರೆಗೆ ಕಾದು ನೋಡಬೇಕಿದೆ. ಅವರ ಫಿಟ್‌ನೆಸ್ ಕುರಿತು ಅಧಿಕೃತ ಮಾಹಿತಿ ಬಂದ ಮೇಲಷ್ಟೇ ವಿಶ್ವಕಪ್ ಟೂರ್ನಿಗೆ ಅವರ ಲಭ್ಯತೆ ಬಗ್ಗೆ ಹೇಳಲು ಸಾಧ್ಯ’ ಎಂದರು.

‘ಬೂಮ್ರಾ ಅವರ ವೈದ್ಯಕೀಯ ವರದಿಗಳನ್ನು ಕೂಲಂಕಷವಾಗಿ ನೋಡಿಲ್ಲ. ಸದ್ಯ ನಡೆಯುತ್ತಿರುವ ಸರಣಿಯಲ್ಲಿ ಮಾತ್ರ ಆಡುತ್ತಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.