ADVERTISEMENT

ವಿರಾಟ್ ಬಳಗಕ್ಕೆ ಅಭ್ಯಾಸ ಇಂದು

ಭಾರತ – ನ್ಯೂಜಿಲೆಂಡ್ ನಡುವಣ ಅಭ್ಯಾಸ ಪಂದ್ಯ

​ಪ್ರಜಾವಾಣಿ ವಾರ್ತೆ
Published 24 ಮೇ 2019, 19:57 IST
Last Updated 24 ಮೇ 2019, 19:57 IST
ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ   

ಲಂಡನ್: ಮೂರನೇ ವಿಶ್ವಕಪ್ ಗೆಲುವಿನ ಕನಸಿನಲ್ಲಿರುವ ಭಾರತ ತಂಡವು ಶನಿವಾರ ಇಲ್ಲಿ ನ್ಯೂಜಿಲೆಂಡ್ ಎದುರು ಅಭ್ಯಾಸ ಪಂದ್ಯ ಆಡಲಿದೆ.

ದಿ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬಳಗವು ತನ್ನ ಸಾಮರ್ಥ್ಯವನ್ನು ಪರೀಕ್ಷೆಗೆ ಒಡ್ಡಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಂತರ ಭಾರತ ತಂಡದ ಆಟಗಾರರು ಅಭ್ಯಾಸ ಮಾಡಿರಲಿಲ್ಲ. ಹೋದ ಬುಧವಾರವಷ್ಟೇ ಇಂಗ್ಲೆಂಡ್‌ಗೆ ತೆರಳಿತ್ತು. ಅದರಿಂದಾಗಿ ವಿಶ್ವಕಪ್‌ ಟೂರ್ನಿಯ ಪೂರ್ವಾಭ್ಯಾಸ ಕಿವೀಸ್‌ ವಿರುದ್ಧದ ಪಂದ್ಯದಿಂದಲೇ ಆರಂಭವಾಗಲಿದೆ.

ADVERTISEMENT

ಮಾರ್ಚ್‌ 13ರಂದು ಆಸ್ಟ್ರೇಲಿಯಾ ಎದುರು ಏಕದಿನ ಪಂದ್ಯ ಆಡಿದ್ದ ವಿರಾಟ್ ಬಳಗವು ನಂತರ ಐಪಿಎಲ್‌ನಲ್ಲಿ ಬಿಸಿಯಾಗಿತ್ತು. ಆದ್ದರಿಂದ ಇಂಗ್ಲೆಂಡ್ ನೆಲದ ವಾತಾವರಣ ಹೊಂದಿಕೊಳ್ಳಲು ಮತ್ತು ಆಟದ ಲಯ ಕಂಡುಕೊಳ್ಳಲು ಈ ಪಂದ್ಯ ಮಹತ್ವದ್ದಾಗಿದೆ. ಒಟ್ಟು ಎರಡು ಪಂದ್ಯಗಳನ್ನು ಭಾರತ ಆಡಲಿದೆ. 28ರಂದು ಬಾಂಗ್ಲಾದೇಶ ತಂಡದ ವಿರುದ್ಧ ಇನ್ನೊಂದು ಪಂದ್ಯ ನಡೆಯಲಿದೆ.

ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಅವರು ಇನಿಂಗ್ಸ್‌ ಆರಂಭಿಸುವುದು ಖಚಿತ. ನಾಲ್ಕನೇ ಕ್ರಮಾಂಕದಲ್ಲಿ ಯಾರು ಕಣಕ್ಕಿಳಿಯಲಿದ್ದಾರೆಂಬ ಕುತೂಹಲ ಇಲ್ಲಿಯೂ ಇದೆ. ರಾಹುಲ್, ವಿರಾಟ್. ಕೇದಾರ್ ಅಥವಾ ಧೋನಿಯವರಲ್ಲಿ ಒಬ್ಬರು ತಮ್ಮನ್ನು ಪ್ರಯೋಗಕ್ಕೆ ಒಡ್ಡಿಕೊಳ್ಳುವ ಸಾಧ್ಯತೆ ಇದೆ.

ಮಧ್ಯಮವೇಗಿಗಳಾ ಜಸ್‌ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ತಮ್ಮ ಭುಜಬಲವನ್ನು ಪರೀಕ್ಷಿಸಿಕೊಳ್ಳಲಿದ್ದಾರೆ. ಸ್ಪಿನ್ನರ್‌ಗಳಾದ ರವೀಂದ್ರ ಜಡೇಜ, ಕುಲದೀಪ್ ಯಾದವ್ ಕೂಡ ತಮ್ಮ ಸ್ಪಿನ್ ಅಸ್ತ್ರಗಳನ್ನು ಹರಿತಗೊಳಿಸಿಕೊಳ್ಳುವ ಯೋಚನೆಯಲ್ಲಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ವಿಜಯಶಂಕರ್ ಅವರಲ್ಲಿ ಒಬ್ಬರಿಗೆ ಸ್ಥಾನ ಸಿಗಬಹುದು. ಐಪಿಎಲ್‌ನಲ್ಲಿ ಮಿಂಚು ಹರಿಸಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚು.

ನ್ಯೂಜಿಲೆಂಡ್ ತಂಡವೂ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. 28ರಂದು ವೆಸ್ಟ್‌ ಇಂಡೀಸ್ ತಂಡವನ್ನು ಎದುರಿಸಲಿದೆ.

ಕೇನ್ ವಿಲಿಯಮ್ಸನ್, ಮಾರ್ಟಿನ್ ಗಪ್ಟಿಲ್, ಬೌಲರ್ ಕಾಲಿನ್ ಡಿ ಗ್ರ್ಯಾಂಡ್‌ಹೋಮ್ ಅವರು ಐಪಿಎಲ್‌ನಲ್ಲಿ ಆಡಿದ್ದರು. ಟಾಮ್ ಲಥಾಮ್, ಕಾಲಿನ್ ಮನ್ರೊ ಮತ್ತು ಮಿಚೆಲ್ ಸ್ಯಾಂಟನರ್ ಅವರು ಉತ್ತಮ ಲಯದಲ್ಲಿದ್ದಾರೆ.

ತಂಡಗಳು ಇಂತಿವೆ

ಭಾರತ: ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮಾ, ಮಹೇಂದ್ರಸಿಂಗ್ ಧೋನಿ (ವಿಕೆಟ್‌ಕೀಪರ್), ರವೀಂದ್ರ ಜಡೇಜ, ಕೇದಾರ್ ಜಾಧವ್, ದಿನೇಶ್ ಕಾರ್ತಿಕ್, ಜಸ್‌ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್, ಮೊಹಮ್ಮದ್ ಶಮಿ, ವಿಜಯಶಂಕರ್, ಕುಲದೀಪ್ ಯಾದವ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲೆಂಡೆಲ್, ಟ್ರೆಂಟ್ ಬೌಲ್ಡ್‌, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಲಾಕಿ ಫರ್ಗ್ಯುಸನ್, ಮಾರ್ಟಿನ್ ಗಪ್ಟಿಲ್, ಮ್ಯಾಟ್ ಹೆನ್ರಿ, ಟಾಮ್ ಲಥಾಮ್, ಕಾಲಿನ್ ಮನ್ರೊ, ಜಿಮ್ಮಿ ನೀಶಾಮ್, ಮಿಚೆಲ್ ಸ್ಯಾಂಟನರ್, ಈಶ್ ಸೋಧಿ, ಟಿಮ್ ಸೌಥಿ, ರಾಸ್ ಟೇಲರ್.

ಇಂಗ್ಲೆಂಡ್: ಎಯಾನ್ ಮಾರ್ಗನ್ (ನಾಯಕ), ಮೋಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೆಸ್ಟೊ, ಜೋಸ್ ಬಟ್ಲರ್, ಟಾಮ್ ಕರನ್, ಲಿಯಾಮ್ ಡೇವೊನ್, ಲಿಯಾಮ್ ಪ್ಲಂಕೆಟ್, ಆದಿಲ್ ರಶೀದ್, ಜೋ ರೂಟ್, ಜೇಸನ್ ರಾಯ್, ಬೆನ್ ಸ್ಟೋಕ್ಸ್‌, ಜೇಮ್ಸ್‌ ವಿನ್ಸ್, ಕ್ರಿಸ್ ವೋಕ್ಸ್‌, ಮಾರ್ಕ್ ವುಡ್,

ಆಸ್ಟ್ರೇಲಿಯಾ: ಆ್ಯರನ್ ಫಿಂಚ್ (ನಾಯಕ), ಜೇಸ್ ಬೆಹ್ರನ್‌ಡ್ರಾಫ್, ಅಲೆಕ್ಸ್‌ ಕ್ಯಾರಿ, ನೇಥನ್ ಕೌಲ್ಟರ್ ನೈಲ್, ಪ್ಯಾಟ್ ಕಮಿನ್ಸ್‌, ಉಸ್ಮಾನ್ ಖ್ವಾಜಾ, ನೇಥನ್ ಲಯನ್, ಶಾನ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಕೇನ್ ರಿಚರ್ಡ್ಸನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆ್ಯಡಂ ಜಂಪಾ.

***

ಪಂದ್ಯ ಆರಂಭ: ಮಧ್ಯಾಹ್ನ 3

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌ ನೆಟ್‌ವರ್ಕ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.