ADVERTISEMENT

ವಿಶ್ವಕಪ್ ವಿಜೇತ ಇಂಗ್ಲೆಂಡ್‌ನ ಮಾಜಿ ನಾಯಕ ಮಾರ್ಗನ್ ಕ್ರಿಕೆಟ್‌ಗೆ ವಿದಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಫೆಬ್ರುವರಿ 2023, 12:29 IST
Last Updated 13 ಫೆಬ್ರುವರಿ 2023, 12:29 IST
ಇಯಾನ್ ಮಾರ್ಗನ್
ಇಯಾನ್ ಮಾರ್ಗನ್   

ಲಂಡನ್: ಇಂಗ್ಲೆಂಡ್‌ನ ಚೊಚ್ಚಲ ಏಕದಿನ ವಿಶ್ವಕಪ್ ವಿಜೇತ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್, ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹಾಡಿದ್ದಾರೆ.

ಕ್ರಿಕೆಟ್‌ಗೆ ಹೆಮ್ಮೆಯಿಂದಲೇ ನಿವೃತ್ತಿ ಘೋಷಿಸುವುದಾಗಿ ತಿಳಿಸಿದ್ದಾರೆ.

ಇಯಾನ್ ಮಾರ್ಗನ್ ನಾಯಕತ್ವದಲ್ಲಿ ಇಂಗ್ಲೆಂಡ್, 2019ರ ಏಕದಿನ ವಿಶ್ವಕಪ್ ಜಯಿಸಿತ್ತು.

ADVERTISEMENT

126 ಏಕದಿನ ಮತ್ತು 72 ಟಿ20 ಪಂದ್ಯಗಳಲ್ಲಿ ಮಾರ್ಗನ್, ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು. ಕಪ್ತಾನರಾಗಿ ಎರಡು ಮಾದರಿಗಳಲ್ಲಾಗಿ 118 ಗೆಲುವು ಸಾಧಿಸಿರುವುದು ಕೂಡಾ ದಾಖಲೆಯಾಗಿದೆ.

ಕ್ರಿಕೆಟ್‌ ಬಿಟ್ಟು ಹೋಗಲು ಇದುವೇ ಸೂಕ್ತ ಸಮಯ. ಪ್ರತಿಯೊಂದು ಕ್ಷಣವನ್ನು ಆನಂದಿಸಿದ್ದೇನೆ. ಎಲ್ಲ ಕ್ರೀಡಾಪಟುವಿನಂತೆ ವೃತ್ತಿ ಜೀವನದಲ್ಲಿ ಅನೇಕ ಏಳು-ಬೀಳುಗಳನ್ನು ಕಂಡಿದ್ದೇನೆ. ಕುಟುಂಬ, ಸ್ನೇಹಿತರ ಸಹಕಾರ ಸದಾ ಇತ್ತು. ಈ ಸಂದರ್ಭದಲ್ಲಿ ನನ್ನ ಪತ್ನಿ, ಕುಟುಂಬ, ಸ್ನೇಹಿತರು, ಕೋಚ್, ಸಹ ಆಟಗಾರರು, ಅಭಿಮಾನಿಗಳಿಗೆ ಧನ್ಯವಾದಗಳನ್ನು ಹೇಳಲು ಇಚ್ಛಿಸುತ್ತೇನೆ ಎಂದು ವಿದಾಯ ಸಂದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.