ADVERTISEMENT

ಮಹಿಳಾ ಪ್ರೀಮಿಯರ್‌ ಲೀಗ್‌: ಆರ್‌ಸಿಬಿಗೆ ಕೊನೇ ಪಂದ್ಯ, ಫೈನಲ್ ಕನಸಿನಲ್ಲಿ ಮುಂಬೈ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಮಾರ್ಚ್ 2023, 12:31 IST
Last Updated 21 ಮಾರ್ಚ್ 2023, 12:31 IST
ಆರ್‌ಸಿಬಿ ನಾಯಕಿ ಸ್ಮೃತಿ ಮಂದಾನ ಹಾಗೂ ಮುಂಬೈ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (ಚಿತ್ರಕೃಪೆ: @mipaltan)
ಆರ್‌ಸಿಬಿ ನಾಯಕಿ ಸ್ಮೃತಿ ಮಂದಾನ ಹಾಗೂ ಮುಂಬೈ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ (ಚಿತ್ರಕೃಪೆ: @mipaltan)   

ಮುಂಬೈ: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು ಈ ಬಾರಿಯ ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯೂಪಿಎಲ್‌) ಕ್ರಿಕೆಟ್‌ ಟೂರ್ನಿಯ ತನ್ನ ಕೊನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಕಣಕ್ಕಿಳಿದಿದೆ.

ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಮುಂಬೈ ಪಡೆ ಬೌಲಿಂಗ್‌ ಆಯ್ದುಕೊಂಡಿದೆ.

ಸ್ಮೃತಿ ಮಂದಾನ ನಾಯಕತ್ವದ ಆರ್‌ಸಿಬಿ ಗುಂಪು ಹಂತದಲ್ಲಿ ಆಡಿರುವ ಏಳು ಪಂದ್ಯಗಲ್ಲಿ ಎರಡು ಜಯ ಹಾಗೂ ಐದು ಸೋಲುಗಳನ್ನು ಕಂಡಿದೆ. ಹೀಗಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಪಾಯಿಂಟ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಮುಂಬೈಗೆ ನೇರವಾಗಿ ಫೈನಲ್‌ ತಲುಪಲು ಇಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಹಾಗಾಗಿ ಪಂದ್ಯ ಮಹತ್ವ ಪಡೆದುಕೊಂಡಿದೆ.

ADVERTISEMENT

ಇನಿಂಗ್ಸ್‌ ಆರಂಭಿಸಿರುವ ಆರ್‌ಸಿಬಿಗೆ ಆರಂಭಿಕ ಆಘಾತ ಎದುರಾಗಿದೆ. ನಾಯಕಿ ಸ್ಮೃತಿ ಜೊತೆ ಕ್ರೀಸ್‌ಗಿಳಿದ ಸೋಫಿ ಡಿವೈನ್‌ ಖಾತೆ ತೆರೆಯುವ ಮೊದಲೇ ಪೆವಿಲಿಯನ್‌ ಸೇರಿಕೊಂಡಿದ್ದಾರೆ. ಇದೀಗ ಎಲಿಸ್‌ ಪೆರ್ರಿ ಆಗಮಿಸಿದ್ದಾರೆ. ತಂಡದ ಮೊತ್ತ ಮೊದಲ ಓವರ್‌ ಮುಕ್ತಾಯಕ್ಕೆ 1 ವಿಕೆಟ್‌ ನಷ್ಟಕ್ಕೆ 1 ರನ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.