ಜೆಮಿಮಾ ರಾಡ್ರಿಗಸ್
ಚಿತ್ರ: @indar_singh02
ವಡೋದರಾ: ಇಲ್ಲಿ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್ 2026ರ (WPL) ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 203 ರನ್ ಕಲೆಹಾಕಿತು. ಆ ಮೂಲಕ ಫೈನಲ್ ಗೆಲ್ಲಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 204 ರನ್ ಟಾರ್ಗೆಟ್ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಪರ ನಾಯಕಿ ಜೆಮಿಮಾ ರಾಡ್ರಿಗಸ್ (57 ರನ್, 37ಎ, 4X8) ಹಾಗೂ ಲಾರಾ ವೊಲ್ವಾರ್ಡ್ಟ್ (44 ರನ್, 25ಎ, 4X3, 6X2) ಹಾಗೂ ಚಿನೆಲ್ಲೆ ಹೆನ್ರಿ ಸ್ಫೋಟಕ 35 ರನ್‌ಗಳ ನೆರವಿನಿಂದ ಡೆಲ್ಲಿ ತಂಡ 200ಕ್ಕೂ ಅಧಿಕ ರನ್ ಕಲೆಹಾಕುವಲ್ಲಿ ಯಶಸ್ವಿಯಾಯಿತು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಸಯಾಲಿ ಸತ್ಘರೆ, ನಡಿನ್ ಡಿ ಕ್ಲರ್ಕ್ ಹಾಗೂ ಅರುಂಧತಿ ರೆಡ್ಡಿ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ 2022ರಲ್ಲಿ ಒಂದು ಬಾರಿ ಟ್ರೋಫಿ ಗೆದ್ದಿದ್ದರೆ, ಇದುವರೆಗೆ ಮೂರು ಬಾರಿ ಫೈನಲ್ ತಲುಪಿರುವ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಒಮ್ಮೆ ಕೂಡ ಟ್ರೋಫಿ ಜಯಿಸಿಲ್ಲ. ಇದೀಗ 4ನೇ ಭಾರಿಯೂ ಫೈನಲ್ ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.