ನವದೆಹಲಿ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 7 ವಿಕೆಟ್‌ಗಳ ಜಯ ಸಾಧಿಸಿದೆ.
ಶನಿವಾರ ಇಲ್ಲಿನ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 190 ರನ್ ಪೇರಿಸಿತು.
ಗುಜರಾತ್ ಪರ ನಾಯಕಿ ಬೆತ್ ಮೂನಿ (66) ಹಾಗೂ ದಯಾಲನ್ ಹೇಮಲತಾ (74) ಬಿರುಸಿನ ಅರ್ಧಶತಕ ಗಳಿಸಿದರು. ಈ ಜೋಡಿ ದ್ವಿತೀಯ ವಿಕೆಟ್‌ಗೆ 121 ರನ್ ಪೇರಿಸಿತು.
ಈ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ 19.5 ಓವರ್‌ಗಳಲ್ಲಿ 3 ವಿಕೆಟ್‌ನಷ್ಟಕ್ಕೆ 191 ರನ್‌ಗಳಿಸಿ ಜಯ ಸಾಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.