
ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲೂಪಿಎಲ್) ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿರುವ ಗುಜರಾತ್ ಜೈಂಟ್ಸ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 20 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿದೆ.
ನವಿ ಮುಂಬೈನ ಡಿ.ವೈ. ಪಟೇಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತ್ತು.
ಗುಜರಾತ್ ಜೈಂಟ್ಸ್ ಪರ ಆರಂಭಿಕ ಆಟಗಾರ್ತಿ ಬೆತ್ ಮೂನಿ 33 ರನ್ (26 ಎಸೆತ), ಕನಿಕಾ ಅಹುಜಾ 35 ರನ್ (18 ಎಸೆತ), ಜಾರ್ಜಿಯಾ ವೇರ್ಹ್ಯಾಮ್ 43 ರನ್ (33 ಎಸೆತ) ಹಾಗೂ ಭಾರತಿ ಫುಲ್ಮಾಲಿ 36 ರನ್ (15 ಎಸೆತ) ಉತ್ತಮ ಆಟವಾಡಿದರು.
ಮುಂಬೈ ಇಂಡಿಯನ್ಸ್ ಪರ ಶಬ್ನಿಮ್ ಇಸ್ಮಾಯಿಲ್, ಹೇಲಿ ಮ್ಯಾಥ್ಯೂಸ್, ನಿಕೋಲಾ ಕ್ಯಾರಿ ಹಾಗೂ ಅಮೆಲಿಯಾ ಕೆರ್ ತಲಾ ಒಂದು ವಿಕೆಟ್ ಪಡೆದರು.
ಟೂರ್ನಿಯಲ್ಲಿ ಎರಡನೇ ಗೆಲುವಿನ ನಿರೀಕ್ಷೆಯಲ್ಲಿರುವ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡವು ಪಂದ್ಯ ಗೆಲ್ಲಲು 193 ರನ್ ಗಳಿಸಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.