ADVERTISEMENT

IND vs ENG 4th Test: ಇಂಗ್ಲೆಂಡ್ ವಿರುದ್ಧ ಜೈಸ್ವಾಲ್ 1,000 ರನ್ ಸಾಧನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜುಲೈ 2025, 7:08 IST
Last Updated 24 ಜುಲೈ 2025, 7:08 IST
<div class="paragraphs"><p>ಯಶಸ್ವಿ ಜೈಸ್ವಾಲ್</p></div>

ಯಶಸ್ವಿ ಜೈಸ್ವಾಲ್

   

(ಪಿಟಿಐ ಚಿತ್ರ)

ಮ್ಯಾಂಚೆಸ್ಟರ್: ಆತಿಥೇಯ ಇಂಗ್ಲೆಂಡ್ ವಿರುದ್ಧ ಇಲ್ಲಿನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅರ್ಧಶತಕದ ಸಾಧನೆ ಮಾಡಿದ್ದಾರೆ.

ADVERTISEMENT

ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ 1,000 ರನ್‌ ಗಳಿಸಿದ್ದಾರೆ. ತಮ್ಮ 16ನೇ ಇನಿಂಗ್ಸ್‌ನಲ್ಲಿ ಜೈಸ್ವಾಲ್, ಈ ಸಾಧನೆ ಮಾಡಿದ್ದಾರೆ. ಆ ಮೂಲಕ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ದಾಖಲೆಯನ್ನು ಸರಿಗಟ್ಟಿದ್ದಾರೆ.

ಅಂದ ಹಾಗೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗದಲ್ಲಿ ಸಾವಿರ ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯು ದಿಗ್ಗಜ ರಾಹುಲ್ ದ್ರಾವಿಡ್ (15 ಇನಿಂಗ್ಸ್) ಅವರ ಹೆಸರಲ್ಲಿದೆ.

ಓಲ್ಡ್ ಟ್ರಾಫರ್ಡ್‌ನಲ್ಲಿ 50 ವರ್ಷಗಳ ಬಳಿಕ ಅರ್ಧಶತಕ ಸಾಧನೆ...

107 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 58 ರನ್ ಗಳಿಸಿ (10 ಬೌಂಡರಿ, 1 ಸಿಕ್ಸರ್) ಔಟ್ ಆದರು. ಆ ಮೂಲಕ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ 50 ವರ್ಷಗಳ ಬಳಿಕ ಅರ್ಧಶತಕ ಗಳಿಸಿದ ಭಾರತೀಯ ಆರಂಭಿಕ ಬ್ಯಾಟರ್ ಎನಿಸಿದ್ದಾರೆ. 1974ರಲ್ಲಿ ಸುನಿಲ್ ಗವಾಸ್ಕರ್ 58 ರನ್ ಗಳಿಸಿದ್ದರು.

ಯಶಸ್ವಿ ಜೈಸ್ವಾಲ್

ಆಂಗ್ಲರ ವಿರುದ್ಧ ಜೈಸ್ವಾಲ್ ಅಮೋಘ ಸಾಧನೆ...

ಟೆಸ್ಟ್ ಕ್ರಿಕೆಟ್‌ನಲ್ಲಿ ಜೈಸ್ವಾಲ್ ಈವೆರೆಗೆ ಒಟ್ಟು 2,089 ರನ್ ಕಲೆ ಹಾಕಿದ್ದಾರೆ. ಈ ಪೈಕಿ ಇಂಗ್ಲೆಂಡ್ ವಿರುದ್ಧವೇ 1,003 ರನ್‌ಗಳ ಸಾಧನೆ ಮಾಡಿದ್ದಾರೆ.

ಜೈಸ್ವಾಲ್ ತಮ್ಮ ವೃತ್ತಿಜೀವನದಲ್ಲಿ ಐದು ಶತಕ ಹಾಗೂ 12 ಅರ್ಧಶತಕಗಳನ್ನು ಗಳಿಸಿದ್ದಾರೆ. ಈ ಪೈಕಿ ಆಂಗ್ಲರ ವಿರುದ್ಧವೇ ಮೂರು ಶತಕ ಹಾಗೂ ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ.

ವೃತ್ತಿ ಜೀವನದಲ್ಲಿ 50.95ರ ಸರಾಸರಿ ಹೊಂದಿರುವ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ಬರೋಬ್ಬರಿ 66.86ರ ಸರಾಸರಿ ಕಾಪಾಡಿಕೊಂಡಿದ್ದಾರೆ.

ಪ್ರಸಕ್ತ ಇಂಗ್ಲೆಂಡ್ ವಿರುದ್ಧ ಸಾಗುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಶತಕ ಗಳಿಸಿದ್ದ ಜೈಸ್ವಾಲ್ (101 ಹಾಗೂ 4), ದ್ವಿತೀಯ ಟೆಸ್ಟ್‌ನಲ್ಲಿ ಅರ್ಧಶತಕದ (87 ಹಾಗೂ 28) ಸಾಧನೆ ಮಾಡಿದ್ದರು. ಆದರೆ ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ (13 ಹಾಗೂ 0) ಅನುಭವಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.