ಮುಂಬೈ: ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ವಿಶೇಷ ಸಾಧನೆ ಮಾಡಲಿದ್ದಾರೆ ಎಂದು ಅನುಭವಿ ಆಟಗಾರ ಯುವರಾಜ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
2011ರಲ್ಲಿ ಭಾರತ ತಂಡವು ವಿಶ್ವಕಪ್ ಜಯಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಆಲ್‌ರೌಂಡರ್ ಯುವರಾಜ್ ಸಿಂಗ್ ಇಲ್ಲಿ ನಡೆದ ಮನಿಗ್ರಾಮ್ ಕಾರ್ಯಕ್ರಮದಲ್ಲಿ ಹಾರ್ದಿಕ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
‘ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಹಾರ್ದಿಕ್ ಪಾಂಡ್ಯ ಉತ್ತಮ ಲಯದಲ್ಲಿದ್ದಾರೆ. ಇದೇ ಆಟವನ್ನು ಇಂಗ್ಲೆಂಡ್‌ನಲ್ಲಿಯೂ ಅವರು ಮುಂದುವರಿಸಿದರೆ ಅದರಿಂದ ತಂಡಕ್ಕೆ ಬಹಳಷ್ಟು ಲಾಭವಾಗುತ್ತದೆ’ ಎಂದು ಯುವರಾಜ್ ಸಿಂಗ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.