ನವದೆಹಲಿ: ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಪ್ರಧಾನಮಂತ್ರಿಗಳ ಪರಿಹಾರ ನಿಧಿ (ಪಿಎಂ ಕೇರ್ಸ್)ಗೆ ₹ 50 ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.
‘ಇಂತಹ ಕಠಿಣ ಸಮಯದಲ್ಲಿ ದೇಶದ ಪರವಾಗಿ ಎಲ್ಲರೂ ಒಂದಾಗಿ ನಿಲ್ಲಬೇಕು. ಆಗ ಎಂತಹುದೇ ದೊಡ್ಡ ಸಮಸ್ಯೆಯಿದ್ದರೂ ಎದುರಿಸಲು ಸಾಧ್ಯವಾಗುತ್ತದೆ’ ಎಂದು ಯುವಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.