ADVERTISEMENT

ದೆಹಲಿ ಹಿಂಸಾಚಾರ: ಶಾಂತಿ ಕಾಪಾಡುವಂತೆ ಮನವಿ ಮಾಡಿದ ಸೆಹ್ವಾಗ್, ಯುವರಾಜ್

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 9:22 IST
Last Updated 26 ಫೆಬ್ರುವರಿ 2020, 9:22 IST
   

ನವದೆಹಲಿ: ರಾಷ್ಟ್ರ ರಾಜಧಾನಿದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್‌ ಮತ್ತು ಯುವರಾಜ್‌ ಸಿಂಗ್‌,ಶಾಂತಿ ಕಾಪಾಡುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ.

ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್‌, ‘ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ ದುರದೃಷ್ಟಕರವಾದದ್ದು. ಶಾಂತವಾಗಿರುವಂತೆ ಎಲ್ಲರಲ್ಲೂ ಮನವಿ ಮಾಡಿಕೊಳ್ಳುತ್ತೇನೆ. ಯಾರೊಬ್ಬರಿಗೆ ಆಗುವ ಗಾಯ ಅಥವಾ ಯಾರೊಬ್ಬರು ಮಾಡುವದಾಳಿಯು ರಾಷ್ಟ್ರ ರಾಜಧಾನಿಗೆ ಅಂಟುವ ಕಳಂಕವಾಗಲಿದೆ. ಶಾಂತಿ ಮೂಡಲಿ ಮತ್ತು ಎಲ್ಲರಿಗೂ ತಿಳುವಳಿಕೆ ಬರಲೆಂದು ಆಶಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

‘ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವು ಹೃದಯವನ್ನು ಘಾಸಿಗೊಳಿಸುವಂತದ್ದು. ಶಾಂತಿ ಮತ್ತು ಸೌಹಾರ್ದತೆ ಕಾಪಾಡುವಂತೆ ಪ್ರತಿಯೊಬ್ಬರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬವಿಶ್ವಾಸವಿದೆ. ಏನೇ ಆದರೂ ಕೊನೆಗೆನಾವೆಲ್ಲರೂ ಮನುಷ್ಯರೇ. ನಮೆಗೆಲ್ಲ ಪ್ರೀತಿ, ಗೌರವದ ಅಗತ್ಯವಿದೆ’ ಎಂದು ಯುವರಾಜ್‌ ಸಿಂಗ್‌ ಕರೆ ನೀಡಿದ್ದಾರೆ.

ADVERTISEMENT

ಶಾಂತಿ ಕಾಪಾಡುವಂತೆಹರ್ಭಜನ್‌ ಸಿಂಗ್‌ ಅವರೂ ಮನವಿ ಮಾಡಿದ್ದಾರೆ.

ಎರಡು ದಿನಗಳ ಭೇಟಿ ಸಲುವಾಗಿ ಭಾರತ ಪ್ರವಾಸ ಕೈಗೊಂಡಿದ್ದಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಫೆಬ್ರುವರಿ 24ರಂದು ಗುಜರಾತಿನಅಹಮದಾಬಾದ್‌ಗೆ ಭೇಟಿ ನೀಡಿದ್ದರು.ಇದೇ ವೇಳೆ ಸಿಎಎ ಪರ ಮತ್ತು ವಿರುದ್ಧದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾ ಸ್ವರೂಪ ಪಡೆದುಕೊಂಡಿದ್ದು, ಸುಮಾರು 20 ಜನರು ಪ್ರಾಣ ಕಳೆದುಕೊಂಡಿದ್ದಾರೆ. 150ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.