ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ಪತ್ನಿ ಹಜೆಲ್ ಕೀಚ್, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಸಂತೋಷದ ಸುದ್ದಿಯನ್ನು ಯುವಿ ಅವರು ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಲ್ಲಿ ಹಂಚಿದ್ದಾರೆ.
'ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬ, ಸ್ನೇಹಿತರಿಗೆ ಇಂದು ದೇವರು ನಮಗೆ ಗಂಡು ಮಗುವನ್ನು ಕರುಣಿಸಿದ್ದಾನೆ ಎಂದು ಹೇಳಲು ಖುಷಿಯಾಗುತ್ತಿದೆ. ಈ ಆಶೀರ್ವಾದಕ್ಕಾಗಿ ನಾವು ದೇವರಿಗೆ ಧನ್ಯವಾದ ಸಲ್ಲಿಸುತ್ತೇವೆ. ಈ ಸಂದರ್ಭಧಲ್ಲಿ ನಮ್ಮ ಖಾಸಗಿತನಕ್ಕೆ ಗೌರವ ನೀಡಲು ಕೋರುತ್ತೇವೆ' ಎಂದು ಹೇಳಿದ್ದಾರೆ.
ಯುವಿ ದಂಪತಿಗೆ ಮಾಜಿ ಸಹ ಆಟಗಾರರು ಸೇರಿದಂತೆ, ಕ್ರಿಕೆಟ್-ಕ್ರೀಡಾ, ಸಿನಿಮಾ, ರಾಜಕೀಯ ಸೇರಿದಂತೆ ಪ್ರಮುಖ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿವೆ.
ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್, ಹರಭಜನ್ ಸಿಂಗ್, ಮೊಹಮ್ಮದ್ ಕೈಫ್, ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಮುಂತಾದವರು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.