ಯಜುವೇಂದ್ರ ಚಾಹಲ್ ಮತ್ತು ಧನಶ್ರೀ
–ಟ್ವಿಟರ್ ಚಿತ್ರ
ಮುಂಬೈ: ಕ್ರಿಕೆಟಿಗ ಯಜುವೇಂದ್ರ ಚಾಹಲ್ ಮತ್ತು ಧನಶ್ರೀ ವರ್ಮಾ ಅವರು ಸಲ್ಲಿಸಿರುವ ವಿಚ್ಛೇದನ ಅರ್ಜಿಗೆ ಸಂಬಂಧಿಸಿ ಆರು ತಿಂಗಳ ಕಡ್ಡಾಯ ಕಾಯುವಿಕೆ (ಕೂಲಿಂಗ್ ಆಫ್) ಅವಧಿಗೆ ಬಾಂಬೆ ಹೈಕೋರ್ಟ್ ಬುಧವಾರ ವಿನಾಯಿತಿ ಮಾಡಿದೆ.
ಗುರುವಾರದ ಒಳಗೆ ಅವರ ವಿಚ್ಚೇ ದನ ಅರ್ಜಿ ಇತ್ಯರ್ಥಗೊಳಿಸುವಂತೆಯೂ ಕುಟುಂಬ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದೆ.
ಇದೇ ಶನಿವಾರ ಆರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ (ಐಪಿಎಲ್)ನಲ್ಲಿ ಪಾಲ್ಗೊಳ್ಳ ಲಿರುವ ಕಾರಣ ಚಾಹಲ್ ಅವರು ಲಭ್ಯರಿರುವುದಿಲ್ಲ ಎಂದು ನ್ಯಾಯಮೂರ್ತಿ ಮಾಧವ ಜಮಾದಾರ್ ಅವರಿದ್ದ ಏಕಸದಸ್ಯ ಪೀಠವು ತಿಳಿಸಿತು.
ಈ ವರ್ಷದ ಫೆಬ್ರುವರಿ 5ರಂದು ಚಾಹಲ್ ಮತ್ತು ಧನಶ್ರೀ ಅವರು ಪರಸ್ಪರ ಸಮ್ಮತಿಯ ವಿಚ್ಛೇದನ ಕೋರಿ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ ಫೆ. 20ರಂದು ಕಾಯುವಿಕೆ ಯ ಅವಧಿಗೆ ವಿನಾಯಿತಿ ನೀಡಲು ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಇವರಿಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.