ADVERTISEMENT

ಜಿಂಬಾಬ್ವೆ ಕ್ರಿಕೆಟ್ ತಂಡ ಅಮಾನತು

ಪಿಟಿಐ
Published 19 ಜುಲೈ 2019, 18:31 IST
Last Updated 19 ಜುಲೈ 2019, 18:31 IST
   

ಹರಾರೆ: ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ (ಐಸಿಸಿ) ನಿಯಮಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿ ಜಿಂಬಾಬ್ವೆ ಕ್ರಿಕೆಟ್ ತಂಡವನ್ನು ಐಸಿಸಿ ಅಮಾನತುಗೊಳಿಸಿದೆ.

ಈ ಕ್ರಮಕ್ಕೆ ಹಿರಿಯ ಕ್ರಿಕೆಟಿಗರಾದ ಸಿಕಂದರ್ ರಾಜಾ, ಮಾಜಿ ನಾಯಕ ಬ್ರೆಂಡನ್ ಟೇಲರ್‌ ಮತ್ತಿತರು ಬೇಸರ ವ್ಯಕ್ತಪಡಿಸಿದ್ದಾರೆ. ನೂರಾರು ಕ್ರಿಕೆಟಿಗರ ಭವಿಷ್ಯ ಇದರಿಂದ ಕಮರಿಹೋಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ತೀರ್ಪು ಹೊರಬಿದ್ದ ಕೂಡಲೇ ಜಿಂಬಾಬ್ವೆಯ ಆಲ್‌ರೌಂಡರ್‌ ಸೋಲಮನ್ ಮಿರೆ ನಿವೃತ್ತಿ ಘೋಷಿಸಿದ್ದಾರೆ.

ಕಾದು ನೋಡಲು ತೀರ್ಮಾನ: ಮುಂದಿನ ವರ್ಷದ ಆರಂಭದಲ್ಲಿ ಜಿಂಬಾಬ್ವೆ ತಂಡ ಭಾರತ ಪ್ರವಾಸ ಕೈಗೊಳ್ಳುವ ಯೋಜನೆ ಇತ್ತು. ಅಮಾನತು ಹಿನ್ನೆಲೆಯಲ್ಲಿ ಆ ಸರಣಿಯ ಕುರಿತು ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದನ್ನು ಕಾದು ನೋಡಲು ಬಿಸಿಸಿಐ ನಿರ್ಧರಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.