ADVERTISEMENT

ಫುಟ್‌ಬಾಲ್‌: ಎಐಎಫ್‌ಎಫ್‌ ಅಧ್ಯಕ್ಷ ಸ್ಥಾನಕ್ಕೆ ಭುಟಿಯಾ- ಚೌಬೆ ಪೈಪೋಟಿ

ಎಐಎಫ್‌ಎಫ್‌ ಅಧ್ಯಕ್ಷ ಸ್ಥಾನದ ಚುನಾವಣೆ ಇಂದು

ಪಿಟಿಐ
Published 1 ಸೆಪ್ಟೆಂಬರ್ 2022, 14:16 IST
Last Updated 1 ಸೆಪ್ಟೆಂಬರ್ 2022, 14:16 IST
ಬೈಚುಂಗ್‌ ಭುಟಿಯಾ
ಬೈಚುಂಗ್‌ ಭುಟಿಯಾ   

ನವದೆಹಲಿ: ಅಖಿಲ ಭಾರತ ಫುಟ್‌ಬಾಲ್‌ ಫೆಡರೇಷನ್‌ನ (ಎಐಎಫ್‌ಎಫ್‌) ಚುನಾವಣೆ ಶುಕ್ರವಾರ ನಡೆಯಲಿದ್ದು, ಸಂಸ್ಥೆಯ 85 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಜಿ ಆಟಗಾರರೊಬ್ಬರು ಅಧ್ಯಕ್ಷರಾಗಿ ಆಯ್ಕೆಯಾಗಲು ವೇದಿಕೆ ಸಿದ್ದಗೊಂಡಿದೆ.

ಎಐಎಫ್‌ಎಫ್‌ ಅಧ್ಯಕ್ಷ ಸ್ಥಾನಕ್ಕೆ ಭಾರತ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ ಮತ್ತು ಮೋಹನ್‌ ಬಾಗನ್‌ ಹಾಗೂ ಈಸ್ಟ್‌ ಬೆಂಗಾಲ್‌ ತಂಡಗಳ ಮಾಜಿ ಗೋಲ್‌ಕೀಪರ್‌ ಕಲ್ಯಾಣ್‌ ಚೌಬೆ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ.

ಗುಜರಾತ್‌ ಫುಟ್‌ಬಾಲ್‌ ಸಂಸ್ಥೆ ಮತ್ತು ಅರುಣಾಚಲ ಪ್ರದೇಶ ಫುಟ್‌ಬಾಲ್‌ ಸಂಸ್ಥೆಗಳ ಬೆಂಬಲದೊಂದಿಗೆ ಕಣಕ್ಕಿಳಿದಿರುವ ಚೌಬೆ ಅವರು ಗೆಲುವಿನ ನೆಚ್ಚಿನ ಸ್ಪರ್ಧಿ ಎನಿಸಿದ್ದಾರೆ. ಚೌಬೆ ಅವರು ಅವಿರೋಧವಾಗಿ ಆಯ್ಕೆಯಾಗುವರು ಎಂದು ಭಾವಿಸಲಾಗಿತ್ತು. ಆದರೆ ಭುಟಿಯಾ ಕಣಕ್ಕಿಳಿದಿರುವುದರಿಂದ ಚುನಾವಣೆಯ ಕಣ ರಂಗೇರಿದೆ.

ADVERTISEMENT

ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ತಲಾ ಇಬ್ಬರು ನಾಮಪತ್ರ ಸಲ್ಲಿಸಿರುವುದರಿಂದ ನೇರ ಸ್ಪರ್ಧೆ ಏರ್ಪಟ್ಟಿದೆ. ವಿವಿಧ ರಾಜ್ಯ ಸಂಸ್ಥೆಗಳನ್ನು ಪ್ರತಿನಿಧಿಸುವ 34 ಮಂದಿ ಮತ ಚಲಾಯಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.